
ಅರಮನೆ ಮೈದಾನದಲ್ಲಿ ಯಡಿಯೂರಪ್ಪ ಅವರಿಗೆ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ ನೀಡಿ ಸನ್ಮಾನ
ಬೆಂಗಳೂರು: ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ಪ್ರಶಸ್ತಿ ನೀಡಿ ಅಭಿನಂದಿಸಲಾಗಿದೆ. ಬಳಿಕ ಮಾತನಾಡಿದ ಬಿಎಸ್ ವೈ ಅವರು, ಅತ್ಯಂತ ಪ್ರೀತಿಯಿಂದ 2021 ನೇ ಸಾಲಿನ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿಯನ್ನು ಸ್ವೀಕರಿಸಿದ್ದೇನೆ. ಅತ್ಯಂತ ಹೃದಯಪೂರ್ವಕವಾಗಿ ಒಪ್ಪಿಕೊಂಡಿದ್ದೇನೆ. ಕನ್ನಡದ ನೆಲ-ಜಲ ರಕ್ಷಣೆಯ ಜವಾಬ್ದಾರಿ ನಮ್ಮೆಲ್ಲರದ್ದು. ಪತ್ರಕರ್ತರು ಇದನ್ನ ಯಾವತ್ತೂ ಮರೆಯಬಾರದು. ಸರ್ಕಾರವು ಸಾಮಾನ್ಯರ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯ ನಿರ್ವಹಿಸುವ ಕಾರ್ಯವನ್ನು ಪತ್ರಿಕೋದ್ಯಮ ಮಾಡುತ್ತಿದೆ ಎಂದು ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಇದೇ ವೇಳೆ ಸಚಿವ ಮುನಿರತ್ನ, ಸಚಿವ ಮುರುಗೇಶ್ ನಿರಾಣಿ, ಪ್ರೆಸ್ ಕ್ಲಬ್ ಅಧ್ಯಕ್ಷ ಸದಾಶಿವ ಶೆಣೈ ಸೇರಿದಂತೆ ಹಲವರು ಉಪಸ್ಥಿತರಿದ್ದರು.