Home District ಆಪರೇಷನ್ ಕಮಲಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ಅಮಿತ್ ಶಾ..? ಆಪರೇಷನ್ ಜವಾಬ್ದಾರಿ ಹೊತ್ತಿರುವ ರಮೇಶ್ ಜಾರಕಿಹೊಳಿ..?

ಆಪರೇಷನ್ ಕಮಲಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ಅಮಿತ್ ಶಾ..? ಆಪರೇಷನ್ ಜವಾಬ್ದಾರಿ ಹೊತ್ತಿರುವ ರಮೇಶ್ ಜಾರಕಿಹೊಳಿ..?

3099
0
SHARE

ಬಿಜೆಪಿ ಆಪರೇಷನ್ ಕಮಲಕ್ಕೆ ಮುಂದಾಗಿದೆ ಎಂಬ ವಿಚಾರದ ಬೆನ್ನಲ್ಲೇ ಹೊಸ ವಿಚಾರವೊಂದು ಬಹಿರಂಗವಾಗಿದೆ. ಕಾಂಗ್ರೆಸ್ ರೆಬಲ್ ಶಾಸಕರು ಬಿಜೆಪಿ ಚಾಣಕ್ಯ ಅಮಿತ್ ಷಾ ಜೊತೆ ಮೊದಲ ಸುತ್ತಿನ ಮಾತುಕತೆ ನಡೆಸಿದ್ದಾರೆ. ಅಪರೇಷನ್ ಜವಾಬ್ದಾರಿಯನ್ನು ರಮೇಶ್ ಜಾರಕಿಹೊಳಿ, ಬಿ.ನಾಗೇಂದ್ರ ಹೊತ್ತಿದ್ದಾರೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಬಳ್ಳಾರಿ ಗ್ರಾಮಾಂತರ ಶಾಸಕ ನಾಗೇಂದ್ರ ದೆಹಲಿಯಲ್ಲೇ ಬೀಡು ಬಿಟ್ಟಿದ್ದಾರೆ. ಸಂಕ್ರಾಂತಿ ವೇಳೆಗೆ ಹೊಸ ಸರ್ಕಾರ ರಚಿಸಲು ಬಿಜೆಪಿ ಮಾಸ್ಟರ್ ಪ್ಲಾನ್ ಮಾಡುತ್ತಿದೆ ಎನ್ನಲಾಗಿದೆ. ಇನ್ನು ಯಡಿಯೂರಪ್ಪ ಕಾಂಗ್ರೆಸ್ ಅತೃಪ್ತರ ಜೊತೆ ದೆಹಲಿಯಲ್ಲಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಮಾತುಕತೆ ವೇಳೆ ಜಾರಕಿಹೊಳಿ ಸಂಪರ್ಕದಲ್ಲಿರುವ ಬಳ್ಳಾರಿಯ ಪ್ರಭಾವಿ ಕಾಂಗ್ರೆಸ್ ನ ಮಾಜಿ ಶಾಸಕರೊಬ್ಬರಿಗೆ ಎಂಎಲ್ಸಿ ಮಾಡುವ ಬಗ್ಗೆಯೂ ಚರ್ಚೆ ನಡೆಸಲಾಗಿದೆ ಎನ್ನಲಾಗಿದೆ. ದೆಹಲಿಯಲ್ಲೇ ಕುಳಿತು ಕಾಂಗ್ರೆಸ್ ಅತೃಪ್ತ ಶಾಸಕರಿಗೆ ಕರೆ ಮಾಡಿ ಸಂಪರ್ಕ ಮಾಡಿದ್ದಾರಂತೆ. ಈ ಮಾಹಿತಿ ಮಾಜಿ ಸಿಎಂ ಸಿದ್ದರಾಮಯ್ಯ ಗಮನಕ್ಕೆ ಬಂದಿರೋದ್ರಿಂದ ಕುದುರೆ ವಾಪಾರದ ಬಗ್ಗೆ ಸಿದ್ದು ಟ್ವಿಟ್ ಮಾಡಿದ್ದಾರೆ ಅಂತಾ ಹೇಳಲಾಗ್ತಿದೆ.

ನಾಗೇಂದ್ರ ಸೇರಿದಂತೆ ಬಳ್ಳಾರಿಯ ನಾಲ್ಕು ಜನ ಶಾಸಕರು ಅತೃಪ್ತ ಗುಂಪಿನಲ್ಲಿದ್ದು ಬಳ್ಳಾರಿ ನಾಲ್ಕು ಜನರಲ್ಲಿ ಒಬ್ಬರು ದೆಹಲಿ, ಇಬ್ಬರು ಬಳ್ಳಾರಿ ಹಾಗೂ ಇನ್ನೂ ಒಬ್ಬ ಶಾಸಕ ಕುಟುಂಬ ಸಮೇತ ಪ್ರವಾಸ ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

LEAVE A REPLY

Please enter your comment!
Please enter your name here