Home District ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ BJP ನಾಯಕರಿಗಿಲ್ಲ ಆಹ್ವಾನ..! ಕಾಂಗ್ರೆಸ್- ಕಮಲ ಕಾರ್ಯಕರ್ತರ ನಡುವೆ ವಾಕ್ಸಮರ..!

ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ BJP ನಾಯಕರಿಗಿಲ್ಲ ಆಹ್ವಾನ..! ಕಾಂಗ್ರೆಸ್- ಕಮಲ ಕಾರ್ಯಕರ್ತರ ನಡುವೆ ವಾಕ್ಸಮರ..!

1497
0
SHARE

ಅದು ಬಡವರಿಗೆ ಮೂರೊತ್ತು ಅನ್ನ ನೀಡುವ ಉದ್ದೇಶದಿಂದ ರೂಪಗೊಂಡ ಯೋಜನೆ. ಅಂತಹ ಯೋಜನೆ ಈಗ ರಾಜಕೀಯ ರೂಪ ಪಡೆದುಕೊಂಡಿದೆ. ಆದ್ರಲ್ಲೂ ಇವತ್ತು ಮಲೆನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೊದಲ ಬಾರಿಗೆ ಇಂದೀರಾ ಕ್ಯಾಂಟೀನ್ ಉದ್ಘಾಟನೆಗೊಂಡಿದ್ದು ಈ ವೇಳೆಯೂ ರಾಜಕೀಯ ದೊಂಬರಾಟ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೊದಲ ಬಾರಿಗೆ ಚಿಕ್ಕಮಗಳೂರು ನಗರ ಸೇರಿದಂತೆ ಜಿಲ್ಲೆಯ 3 ತಾಲೂಕು ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಲಾಗಿದೆ ಆದ್ರೆ ಉದ್ಘಾಟನೆಗೆ ಆಹ್ವಾನ ನೀಡಿಲ್ಲ ಎಂದು ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಅಧ್ಯಕ್ಷರುಗಳು ಸೇರಿದಂತೆ ಬಿಜೆಪಿ ಸದಸ್ಯರುಗಳು ಪ್ರತಿಭಟನೆ ನಡೆಸಿದ್ರು. ಈ ನಡುವೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದು, ಶಾಸಕ ಸಿ ಟಿ ರವಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು.

ನಂತರ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದ್ರು. ನಂತರ ಸಚಿವ ಕೆ ಜೆ ಜಾರ್ಜ್, ಶಾಸಕ ಸಿ ಟಿ ರವಿ ಜೊತೆಗೂಡಿಯೇ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಿದ್ರು.ಪ್ರತಿಭಟನೆ ವೇಳೆ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಅಧ್ಯಕ್ಷರುಗಳು ಸೇರಿದಂತೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿದ್ದನ್ನು ಸಿ. ಟಿ ರವಿ ಖಂಡಿಸಿದ್ರು.

ಅಲ್ಲದೆ ಕಾಂಗ್ರೆಸ್ ಶಾಸಕರ ವಿರುದ್ಧ ಧಿಕ್ಕಾರ ಕೂಗಿ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಬೇಕು ಎಂದು ಬಸವನಹಳ್ಳಿ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿದರು. ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ ಸಂಬಂಧಿಸಿದಂತೆ ಶಿಷ್ಟಾಚಾರ ಉಲ್ಲಂಘಿಸಿದ ಜಿಲ್ಲಾಡಳಿತದ ವಿರುದ್ಧ ಶಿಸ್ತು ಕ್ರಮ ತಗೆದುಕೊಳ್ಳಬೇಕು ಎಂದು ಶಾಸಕ ಸಿ ಟಿ ರವಿ ಆಗ್ರಹಿಸಿದ್ರು.ಒಟ್ಟಾರೆ ಬಡವರಿಗೆ ಅನ್ನ ನೀಡುವ ಉದ್ದೇಶದಿಂದ ರೂಪಗೊಂಡ ಯೋಜನೆಯೊಂದು ರಾಜಕೀಯ ಹೈಡ್ರಾಮಕ್ಕೆ ಕಾರಣವಾಗಿದೆ.

LEAVE A REPLY

Please enter your comment!
Please enter your name here