ಇನ್ನೂ 100 ವರ್ಷ ಕಾಂಗ್ರೆಸ್​ ಅಧಿಕಾರಕ್ಕೆ ಬರಲ್ಲ;ಪ್ರಧಾನಿ ನರೇಂದ್ರ ಮೋದಿ ಭವಿಷ್ಯ 55 mins ago ain user

ತಂತ್ರಜ್ಞಾನ ರಾಜಕೀಯ ರಾಷ್ಟ್ರೀಯ

ನವದೆಹಲಿ:ಕಾಂಗ್ರೆಸ್​ ಪಕ್ಷ ಎಲ್ಲಾ ರಾಜ್ಯಗಳಲ್ಲೂ ಸತತವಾಗಿ ಸೋಲುತ್ತಿದೆ ಒಂದೊಂದೆ ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಳ್ಳುತ್ತಿದೆ. ಆದರೂ ಅವರಿಗೆ ಬುದ್ದಿ ಬಂದಿಲ್ಲ ಅವರು ವಾಸ್ತವದೊಂದಿಗೆ ಸಂಪರ್ಕ ಕಡಿದುಕೊಂಡಿದ್ದಾರೆ. ಕಳೆದ ಎರಡು ದಶಕಗಳಲ್ಲಿ ಹಲವಾರು ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡರೂ ಅವರು ಇನ್ನೂ ಭ್ರಮೆಯಿಂದ ಹೊರಬಂದಿಲ್ಲ ಎಂದು ಪ್ರತಿಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವ್ಯಂಗ್ಯವಾಡಿದ್ದಾರೆ. ಇನ್ನು 100 ವರ್ಷವಾದರೂ ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ. ಕಾಂಗ್ರೆಸ್​ ಪಕ್ಷಕ್ಕೆ ಅಧಿಕಾರ ನೀಡದಿರಲು ಜನ ನಿರ್ಧರಿಸಿದ್ದಾರೆ. ದೇಶದಲ್ಲಿ ಬಡವರನ್ನು ಹಸಿವಿನಿಂದ ನರಳದಂತೆ ಮಾಡಿದ್ದೇವೆ. 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಆಹಾರ ನೀಡಿದ್ದೇವೆ. ಗಾಂಧೀಜಿಯವರ ಸ್ವದೇಶಿ ಕನಸಿಗೆ ಕಾಂಗ್ರೆಸ್​ ಅಡ್ಡಿಯಾಗಿದೆ. ಆತ್ಮನಿರ್ಭರ ಭಾರತಕ್ಕೆ ಕಾಂಗ್ರೆಸ್​ ವಿರುದ್ಧವಾಗಿದೆ ಎಂದು ಲೋಕಸಭೆಯಲ್ಲಿ ಕಾಂಗ್ರೆಸ್​ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.

Leave a Reply

Your email address will not be published.