Home District ಕರೋನಾ ವೈರಸ್ ಚಿಕಿತ್ಸೆಗಾಗಿ ಆದಿಚುಂಚನಗಿರಿ ಆಸ್ಪತ್ರೆಯಿಂದ ವಿಶೇಷ ಘಟಕ ಸ್ಥಾಪನೆ..

ಕರೋನಾ ವೈರಸ್ ಚಿಕಿತ್ಸೆಗಾಗಿ ಆದಿಚುಂಚನಗಿರಿ ಆಸ್ಪತ್ರೆಯಿಂದ ವಿಶೇಷ ಘಟಕ ಸ್ಥಾಪನೆ..

2741
0
SHARE

ಮಂಡ್ಯ :ಮಾರಣಾಂತಿಕ ಕರೋನಾ ವೈರಸ್ ಸೋಂಕಿತರ ಚಿಕಿತ್ಸೆಗಾಗಿ ಆದಿ ಚುಂಚನಗಿರಿ ವೈದ್ಯಕೀಯ ಆಸ್ಪತ್ರೆಯು ಸುಮಾರು 25 ಹಾಸಿಗೆಗಳ ಪ್ರತ್ಯೇಕ ಘಟಕವನ್ನು ಸಿದ್ಧ ಮಾಡಲಾಗಿದೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಬೆಳ್ಳೂರು  ಬಳಿ ಇರುವಂಥ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಇಂದಿನಿಂದಲೇ ಈ ವಿಶೇಷ ಕರೋನಾ ಚಿಕಿತ್ಸಾ ಘಟಕ ಆರಂಭವಾಗಿದೆ ಎಂದು ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ನಿರ್ಮಲಾನಂದ ಮಹಾಸ್ವಾಮೀಜಿಯವರು ಪ್ರಜಾ ಟಿವಿಗೆ ತಿಳಿಸಿದ್ದಾರೆ. .

ಶ್ರೀಮಠದ ವತಿಯಿಂದ ಸುಮಾರು 300 ಜನ ಇಡೀ ಜಿಲ್ಲಾದ್ಯಂತ ಜಾಗೃತಿ ಮೂಡಿಸುವ ಕಾರ್ಯದಲ್ಲೂ ಕೂಡ ನಿರತರಾಗಿದ್ದಾರೆ ಕರೋನಾ ವೈರಸ್ ಬಗ್ಗೆ ಏನೆಲ್ಲ ಏನೆಲ್ಲ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು ಪ್ರತಿ ಗ್ರಾಮಕ್ಕೂ ತೆರಳಿ ಜನರಲ್ಲಿ ಜಾಗೃತಿ ಮೂಡಿಸಲಿದ್ದಾರೆ ಎಂದು ಶ್ರೀಗಳು ತಿಳಿಸಿದರು.ಇಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲು ಅಗತ್ಯವಾದ ತೀವ್ರ ನಿಗಾ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಯನ್ನು ದಿನದ 24 ಗಂಟೆಯೂ ಸೇವೆಯಲ್ಲಿರುವಂತೆ ನಿಯೋಜಿಸಲಾಗಿದೆ. ಸೋಂಕಿತರ ಚಿಕಿತ್ಸೆಗೆ ಅಗತ್ಯವಾದ ಔಷಧೋಪಕರಣಗಳನ್ನು ಸಿದ್ಧವಾಗಿಡಲಾಗಿದೆ. ಜಿಲ್ಲಾ ಆರೋಗ್ಯ ಇಲಾಖೆಯೊಂದಿಗೆ ಸಂಪರ್ಕದಲ್ಲಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಬಸ್-ರೈಲು ನಿಲ್ದಾಣಗಳು, ಶಾಲಾ-ಕಾಲೇಜುಗಳು, ಆಸ್ಪತ್ರೆಗಳು, ಮಾರುಕಟ್ಟೆಗಳು ಇತ್ಯಾದಿ ಬಳಿಗಳಲ್ಲಿ ಧ್ವನಿವರ್ಧಕದ ಮೂಲಕ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ.

“ಸಾರ್ವಜನಿಕರು ಗಾಬರಿ ಅಥವಾ ಆತಂಕಕ್ಕೆ ಒಳಗಾಗದೆ ವೈದ್ಯರಿಂದ ಸೂಕ್ತ ಸಲಹೆ-ಚಿಕಿತ್ಸೆ ಪಡೆಯುವ ಜೊತೆಗೆ ವೈಯಕ್ತಿಕ ಸ್ವಚ್ಚತೆ ಮತ್ತು ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಯಾವುದೇ ವದಂತಿಗೆ ಕಿವಿಗೊಡಬಾರದು. ಕೊರೋನಾ ವೈರಸ್ ಶಂಕಿತರು ಆದಿಚುಂಚನಗಿರಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬಹುದು.” ಶ್ರೀಮಠದಿಂದ ಕರೋನಾ  ವೈರಸ್ ಗೆ ವಿಶೇಷ ಘಟಕವನ್ನು ತೆರೆದಿರುವುದು ಜಿಲ್ಲಾ ಜನತೆ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ಸರ್ಕಾರದ ಜೊತೆಗೆ ಖಾಸಗಿ ಹಾಗೂ ಸಮಾಜಮುಖಿ ಕಾರ್ಯದಲ್ಲಿ ತೊಡಗಿರುವ ಮಠಗಳು ಈ ರೀತಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಿದಲ್ಲಿ ಉತ್ತಮ ಸಮಾಜವನ್ನು ನಿರ್ಮಿಸಬಹುದೆಂದು ಆಶಯ ವ್ಯಕ್ತಪಡಿಸಿದ್ದಾರೆ. ಶ್ರೀ ಶ್ರೀ ಶ್ರೀ ನಿರ್ಮಾಲಾನಂದ ಮಹಾಸ್ವಾಮೀಜಿಗಳ ನೇತೃತ್ವದಲ್ಲಿ ಆದಿಚುಂಚನಗಿರಿ ಆಸ್ಪತ್ರೆ ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡುವುದರಲ್ಲಿ ಮಂಡ್ಯ ಜಿಲ್ಲೆಯಲ್ಲೇ ಉತ್ತಮ ಹೆಸರು ಗಳಿಸಿದೆ .ಬಡ ರೋಗಿಗಳಿಗೆ ಉಚಿತ ಚಿಕಿತ್ಸೆ. ಔಷಧಿ ಉಪಕರಣಗಳನ್ನು ನೀಡುತ್ತಿರುವುದು ಶ್ಲಾಘನೀಯ .

LEAVE A REPLY

Please enter your comment!
Please enter your name here