Home District ಕಾಂಗ್ರೆಸ್-ಜೆಡಿಎಸ್ ಮೈತ್ರಿ ಆದ್ರೆ ಕಾಂಗ್ರೆಸ್ ಕಾರ್ಯಕರ್ತರ ಕಗ್ಗೊಲೆ ಖಚಿತ..!! ಮಂಜೇಗೌಡ ಸಮ್ಮಿಶ್ರಕ್ಕೆ ವಿರೋಧ…

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಆದ್ರೆ ಕಾಂಗ್ರೆಸ್ ಕಾರ್ಯಕರ್ತರ ಕಗ್ಗೊಲೆ ಖಚಿತ..!! ಮಂಜೇಗೌಡ ಸಮ್ಮಿಶ್ರಕ್ಕೆ ವಿರೋಧ…

2083
0
SHARE

ಹಾಸನ ಜಿಲ್ಲೆ ಹೊಳೆನರಸೀಪುರ ಕ್ಷೇತ್ರದಿಂದ ಸ್ಪರ್ಧೆಗೆ ಅವಕಾಶ ಮಾಡಿಕೊಟ್ಟು, ತಮ್ಮ ಪರ ಚುನಾವಣಾ ಪ್ರಚಾರಕ್ಕೆ ಬಾರದ ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಎಂ ಆಪ್ತ ಹಾಗೂ ಪರಾಜಿತ ಅಭ್ಯರ್ಥಿ ಬಾಗೂರು ಮಂಜೇಗೌಡ ಅಸಮಾಧಾನ ಹೊರ ಹಾಕಿದ್ದಾರೆ…

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮೂರು ಬಾರಿ ನನ್ನ ಪರ ಪ್ರಚಾರಕ್ಕೆ ಬರುತ್ತೇನೆ ಎಂದು ಸಿಎಂ ಭರವಸೆ ನೀಡಿದ್ದರು. ಆದರೆ ಒಮ್ಮೆಯೂ ಬರಲಿಲ್ಲ. ಇದಕ್ಕೆ ಏನು ಕಾರಣವೋ ಗೊತ್ತಿಲ್ಲ ಎಂದು ಅಸಮಾಧಾನ ಹೊರ ಹಾಕಿದರು…

ಇದೇ ವೇಳೆ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ರಚನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಬಾಗೂರು, ಹಾಗೇನಾದ್ರೂ ಆದರೆ ಹಾಸನ ಜಿಲ್ಲೆಯಲ್ಲಿ ಕಾಂಗ್ರೆಸ್ ಸಮಾಧಿಯಾಗಲಿದೆ. ಕಾಂಗ್ರೆಸ್ ಕಾರ್ಯಕರ್ತರ ಕಗ್ಗೊಲೆ ನಡೆಯಲಿದೆ ಎಂದರು..ಸಮ್ಮಿಶ್ರ ಸರಕಾರ ರಾಷ್ಟ್ರೀಯ ನಾಯಕರ ತೀರ್ಮಾನವಾಗಿದ್ದರೂ, ಈ ವಿಷಯದಲ್ಲಿ ಯೋಚನೆ ಮಾಡಬೇಕು ಎಂದ ಮಂಜೇಗೌಡ, ಮುಂದೆ ಏನು ಮಾಡಬೇಕು ಎಂಬ ಬಗ್ಗೆ ಕಾರ್ಯಕರ್ತರ ಸಭೆ ನಡೆಸಿ ತೀರ್ಮಾನಕೈಗೊಳ್ಳುವೆ ಎಂದರು…

LEAVE A REPLY

Please enter your comment!
Please enter your name here