ಜನತಾ ಪ್ರಣಾಳಿಕೆ, ಜನರದ್ದೇ ಆಳ್ವಿಕೆ ಶೀರ್ಷಿಕೆ ಅಡಿಯಲ್ಲಿ ಜೆಡಿಎಸ್ ಪ್ರಣಾಳಿಕೆ ಬಿಡುಗಡೆಗೊಳಿಸಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಜನರದ್ದೇ ಆಳ್ವಿಕೆ ಶೀರ್ಷಿಕೆ ಅಡಿಯಲ್ಲಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದರು.
ಪ್ರಣಾಳಿಕೆಯಲ್ಲಿ ಪ್ರಮುಖವಾಗಿ ರೈತರ ಸಂಪೂರ್ಣ ಸಾಲಮನ್ನಾ, ಮಹಿಳಾ ಸ್ವ ಸಹಾಯ ಸಂಘಗಳ ಸಾಲಮನ್ನಾ, ಇಸ್ರೇಲ್ ಮಾದರಿಯಲ್ಲಿ ರೈತರಿಗೆ ಕೃಷಿ ಸೌಲಭ್ಯ ಹಾಗೂ ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ದಾರರಿಗೆ ಉಚಿತ ವಿದ್ಯುತ್ ಸೇರಿದಂತೆ ಹಲವು ಭರವಸೆಗಳನ್ನು ಪ್ರಣಾಳಿಕೆಯಲ್ಲಿ ನೀಡಲಾಗಿದೆ.
ಜೆಡಿಎಸ್ ಪ್ರಣಾಳಿಕೆ ಹೈಲೈಟ್ಸ್ ನೋಡೋದಾದ್ರೆ ಲೋಕಾಯುಕ್ತ ಬಲವರ್ಧನೆ, ಎಸಿಬಿ ನಿರ್ಮೂಲನೆ, ಅಧಿಕಾರಕ್ಕೆ ಬಂದ 24ಗಂಟೆಗಳಲ್ಲಿ ರೈತರ ಸಾಲ ಸಂಪೂರ್ಣ ಮನ್ನಾ…
* ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡುದಾರರಿಗೆ ಉಚಿತ ವಿದ್ಯುತ್, ಗ್ರಾಮವಾಸ್ತವ್ಯ ಕಾರ್ಯಕ್ರಮ ಮುಂದುವರಿಕೆ,ಡಾ.ವಿಷ್ಣುವರ್ಧನ್ ಸಮಾಧಿ ಸ್ಥಳದ ವಿವಾದ ಬಗೆಹರಿಸಲಾಗುವುದು.ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು ಮೇಲ್ದರ್ಜೆಗೆ ಏರಿಕೆ,ಆಶಾ ಕಾರ್ಯಕರ್ತೆಯರ ಪ್ರೋತ್ಸಾಹ ಧನ 5 ಸಾವಿರಕ್ಕೆ ಏರಿಕೆ,65 ವರ್ಷ ಮೇಲ್ಪಟ್ಟ ಹಿರಿಯರಿಗೆ ಮಾಸಿಕ 6 ಸಾವಿರ ರೂಪಾಯಿ ಮಾಸಾಶನ…