Home Elections 2019 ಕೇರಳದಲ್ಲಿ ಬಾವಲಿ, ಹಂದಿಯಿಂದ ಹರಡುವ ನಿಫಾ ವೈರಸ್ ಅಟ್ಟಹಾಸಕ್ಕೆ 10 ಮಂದಿ ಬಲಿ..!ಕರ್ನಾಟಕದಲ್ಲೂ ಹೈ ಅಲರ್ಟ್...

ಕೇರಳದಲ್ಲಿ ಬಾವಲಿ, ಹಂದಿಯಿಂದ ಹರಡುವ ನಿಫಾ ವೈರಸ್ ಅಟ್ಟಹಾಸಕ್ಕೆ 10 ಮಂದಿ ಬಲಿ..!ಕರ್ನಾಟಕದಲ್ಲೂ ಹೈ ಅಲರ್ಟ್ ಘೋಷಣೆ

1966
0
SHARE

ಕೇರಳದಲ್ಲಿ ನಿಫಾ ವೈರಸ್ ಅಟ್ಟಹಾಸ. ಮಾಹಾಮಾರಿ ನಿಫಾ ವೈರಸ್‌ಗೆ ಕೇರಳದಲ್ಲಿ 10ಮಂದಿ ಬಲಿ-ಬಾವಲಿ, ಹಂದಿಯಿಂದ ಹರಡುವ ನಿಫಾ ವೈರಸ್. ಕೇರಳ ರಾಜ್ಯಾದ್ಯಂತ ಕಟ್ಟೆಚ್ಚರ ಘೋಷಿಸಿದ ಸರ್ಕಾರ.ಮೊದಲ ಬಾರಿಗೆ ಭಾರತದಲ್ಲಿ ಕಾಣಿಸಿಕೊಂಡಾ ನಿಫಾ ವೈರಸ್. ಆರೋಗ್ಯ-ಕುಟುಂಬ ಕಲ್ಯಾಣ ಇಲಾಖೆಯಿಂದ ಸುತ್ತೋಲೆ. ಕರ್ನಾಟಕದಲ್ಲೂ ಹೈ ಅಲರ್ಟ್ ಘೋಷಣೆ…

ಲಸಿಕೆಯೇ ಇಲ್ಲದ ನಿಗೂಢ ವೈರಾಣು ಸೋಂಕು ಕೇರಳದಲ್ಲಿ ಪತ್ತೆಯಾಗಿದ್ದು, ವೈರಾಣು ಸೋಂಕಿಗೆ ಕನಿಷ್ಟ 6 ಮಂದಿ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.ಕೇರಳದ ಕೊಯಿಕ್ಕೋಡ್‌ ಜಿಲ್ಲೆಯ ಪೆರಂಬಾರಾದಲ್ಲಿ ಕೇವಲ 2 ವಾರದಲ್ಲಿ ಒಂದೇ ಕುಟುಂಬದ ಮೂವರು ಸೇರಿ 6 ಜನ ನಿಗೂಢ ವೈರಸ್‌ ನಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ…
ನಿಗೂಢ ವೈರಸ್‌ ಸೋಂಕಿನಿಂದಾಗಿ ಕಳೆದ ಎರಡು ವಾರದಿಂದ ಜ್ವರದಿಂದ ಬಳಲುತ್ತಿದ್ದ ಪೆರಂಬಾರಾದ ಒಂದೇ ಕುಟುಂಬದ ಮೊಹಮ್ಮದ್‌ ಸಾದಿಕ್‌ (26 ವರ್ಷ), ಮೊಹಮ್ಮದ್‌ ಸಾಲಿಯಾ (28) ಮತ್ತು ಮರಿಯುಮ್ಮಾ (50) ಕೊಯಿಕ್ಕೋಡ್‌ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು…ಇದೀಗ ಮತ್ತೆ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ನಿಪಾಹ್ ಎಂಬ ವೈರಾಣು ಸೋಂಕಿನಿಂದ ಬಳಲುತ್ತಿದ್ದಾ ಈ ಮೂವರಿಗೆ ಚಿಕಿತ್ಸೆ ನೀಡುತ್ತಿದ್ದ ಓರ್ವ ದಾದಿ ಸೇರಿದಂತೆ ಮೂರು ಮಂದಿ ಮೃತರಾಗಿದ್ದಾರೆ ಎನ್ನಲಾಗಿದೆ…
ಅಂತೆಯೇ ಇನ್ನೂ 25ಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದ್ದು, ಈ ಪೈಕಿ ಹಲವರ ಸ್ಥಿತಿ ಗಂಭೀರವಾಗಿದೆ. ನಿಪಾಹ್ ವೈರಾಣು ಸೋಂಕು ಶಂಕಿತ ರೋಗಿಗಳನ್ನು ತೀವ್ರ ಕಟ್ಟೆಚ್ಚರದಿಂದ ಚಿಕಿತ್ಸೆಗೆ ಒಳಪಡಿಸಲಾಗುತ್ತಿದ್ದು, ಪೂರಕ ಔಷಧಗಳಿಂದ ಉಪಚರಿಸಲಾಗುತ್ತಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ…

LEAVE A REPLY

Please enter your comment!
Please enter your name here