Home District ಕೋವಿಡ್ 2ನೇ ಅಲೆ ಹಿನ್ನೆಲೆ ಅಂತರ್ ರಾಜ್ಯ ಸಂಚಾರ ಬಗ್ಗೆ ನಿಗಾ ವಹಿಸಿ; ಎಸ್ ಟಿ...

ಕೋವಿಡ್ 2ನೇ ಅಲೆ ಹಿನ್ನೆಲೆ ಅಂತರ್ ರಾಜ್ಯ ಸಂಚಾರ ಬಗ್ಗೆ ನಿಗಾ ವಹಿಸಿ; ಎಸ್ ಟಿ ಎಸ್

291
0
SHARE

ಮೈಸೂರು: ಕೋವಿಡ್ ಹಿನ್ನೆಲೆಯಲ್ಲಿ ಕರ್ನಾಟಕ ಹಾಗೂ ಕೇರಳ ಗಡಿ ಮಧ್ಯೆ ವಾಹನಗಳ ಸಂಚಾರ ಬಗ್ಗೆ ತೀವ್ರ ನಿಗಾ ವಹಿಸಬೇಕು. ಹಾಗೆಂದು ಸಾರ್ವಜನಿಕರು ಸೇರಿದಂತೆ ವ್ಯಾಪಾರ ವಹಿವಾಟಿಗೂ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೇರಳ ಗಡಿ ಭಾಗದಿಂದ ವಾಹನಗಳ ಸಂಚಾರ ಸಂಬಂಧ ಆರೋಗ್ಯ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ : ಕೋವಿಡ್ ಸಾಂಕ್ರಾಮಿಕ ರೋಗದ ಎರಡನೇ ಅಲೆ ಆರಂಭವಾಗುವ ಲಕ್ಷಣ ಕಾಣುತ್ತಿರುವ ಹಿನ್ನೆಲೆಯಲ್ಲಿ ಕೇರಳ ಗಡಿ ಭಾಗದಿಂದ ವಾಹನಗಳ ಸಂಚಾರ ಹಾಗೂ ತಪಾಸಣೆ ಕ್ರಮ ಹೇಗಿರಬೇಕು ಎಂಬ ಬಗ್ಗೆ ಉನ್ನತಮಟ್ಟದ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ಎಪಿಎಂಸಿ ಸೇರಿದಂತೆ ರಾಜ್ಯದೊಳಗೆ ಹಾಗೂ ಹೊರಗೆ ಮೈಸೂರಿನ ಮುಖಾಂತರ ತರಕಾರಿ ಹಾಗೂ ಆಹಾರ ಧಾನ್ಯಗಳ ವಾಹನಗಳ ಸಂಚಾರ ಆಗಲೇಬೇಕು. ಸಂಚಾರವನ್ನು ನಿರ್ಬಂಧ ಮಾಡಿದರೆ ವಹಿವಾಟು ಸೇರಿದಂತೆ ಎಲ್ಲವಕ್ಕೂ ತೊಂದರೆಯಾಗಲಿದೆ. ಹೀಗಾಗಿ ಆ್ಯಂಟಿಜನ್ ಟೆಸ್ಟ್, ಟೆಂಪ್ರೇಚರ್ ಟೆಸ್ಟ್ ಗಳು ನಡೆಯಲಿ. ಅದಕ್ಕೆ ಬೇಕಿರುವ ಅಗತ್ಯ ಕ್ರಮಗಳನ್ನು ಕೂಡಲೇ ಕೈಗೊಳ್ಳಿ ಎಂದು ಸಚಿವರು ಸೂಚಿಸಿದರು.

ಗಡಿ ಭಾಗದಲ್ಲಿ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು
ಇದೇ ವೇಳೆ ಜಿಲ್ಲಾ ಆರೋಗ್ಯಾಧಿಕಾರಿಯವರಾದ ಡಾ. ಅಮರ್ ನಾಥ್ ಅವರಿಗೆ ಸಚಿವರು ಸೂಚನೆ ನೀಡಿದರು. ಬರುವ ಎಲ್ಲ ಬಸ್ ಗಳ ಪ್ರಯಾಣಿಕರ ತಪಾಸಣೆ ಕೂಡಾ ಆಗಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಂಸದರಾದ ಪ್ರತಾಪ್ ಸಿಂಹ, ದಕ್ಷಿಣ ವಲಯ ಐಜಿ ಪವಾರ್ ಪ್ರವೀಣ್ ಮಧುಕರ್, ಪೊಲೀಸ್ ಆಯುಕ್ತರಾದ ಚಂದ್ರಗುಪ್ತ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ರಿಷ್ಯಂತ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here