Home District ಖಾಸಗಿ ಶಾಲೆಗಳಲ್ಲಿ ಓದುವ ಬಡ ಮಕ್ಕಳ ಆಸೆಗೆ ತಣ್ಣೀರು..! ಸರ್ಕಾರಿ ಶಾಲೆ ಇದ್ದ ಕಡೆ ಖಾಸಗಿ...

ಖಾಸಗಿ ಶಾಲೆಗಳಲ್ಲಿ ಓದುವ ಬಡ ಮಕ್ಕಳ ಆಸೆಗೆ ತಣ್ಣೀರು..! ಸರ್ಕಾರಿ ಶಾಲೆ ಇದ್ದ ಕಡೆ ಖಾಸಗಿ ಶಾಲೆ ಪ್ರವೇಶಕ್ಕೆ ಅವಕಾಶವಿಲ್ಲ..!

439
0
SHARE

ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ನಿಯಮಾವಳಿಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸರ್ಕಾರಿ ಶಾಲೆ ಇದ್ದ ಕಡೆ ಖಾಸಗಿ ಶಾಲೆ ಪ್ರವೇಶಕ್ಕೆ ಅವಕಾಶ ಕಲ್ಪಿಸದಿರಲು ನಿರ್ಧರಿಸಿದೆ. ಬುಧವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದು, ಇದರಿಂದಾಗಿ ನಿಗದಿತ ವ್ಯಾಪ್ತಿಯಲ್ಲಿ ಸರ್ಕಾರಿ ಶಾಲೆ ಇದ್ದರೆ ಪೋಷಕರು ಸರ್ಕಾರಿ ಶಾಲೆಗೆ ಸೇರಿಸಬೇಕಾಗುತ್ತದೆ.

ಅದೇ ವಾಪ್ತಿಯಲ್ಲಿರುವ ಖಾಸಗಿ ಶಾಲೆಗಳಿಗೆ ಆರ್‌ಟಿಇ ಅಡಿಯಲ್ಲಿ ಸೀಟು ಪಡೆಯಲು ಅರ್ಜಿ ಹಾಕುವಂತೆಯೂ ಇಲ್ಲ. ಸರ್ಕಾರ ಸಹ ಆರ್‌ಟಿಇ ಕಾಯ್ದೆಯಡಿ ಪ್ರವೇಶಕ್ಕೆ ಖಾಸಗಿ ಶಾಲೆಗೂ ಮಾನ್ಯತೆ ನೀಡುವುದಿಲ್ಲ. ನಿನ್ನೆ ನಡೆದ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಬೈರೇಗೌಡ, ಪ್ರಸ್ತುತ ಸರ್ಕಾರಿ ಶಾಲೆಗಳಿದ್ದರೂ ಅದೇ ವ್ಯಾಪ್ತಿಯ ಖಾಸಗಿ ಶಾಲೆಗಳಲ್ಲಿ ಕಡ್ಡಾಯ ಶಿಕ್ಷಣ ಕಾಯ್ದೆಯಡಿ ಪ್ರವೇಶಕ್ಕೆ ಸರ್ಕಾರ ಅವಕಾಶ ಕಲ್ಪಿಸಿದೆ.

ಇದರಿಂದಾಗಿ ಎಲ್ಲಾ ಮಕ್ಕಳು ಖಾಸಗಿ ಶಾಲೆಯತ್ತಲೇ ಆಕರ್ಷಣೆಯಾಗುತ್ತಿದ್ದಾರೆ. ಜತೆಗೆ ಸರ್ಕಾರಕ್ಕೂ ಸಾಕಷ್ಟು ಹೊರೆಯಾಗುತ್ತಿದೆ. ಇದನ್ನು ತಪ್ಪಿಸಿ ಸರ್ಕಾರಿ ಶಾಲೆಗಳಿಗೆ ಹೆಚ್ಚು ವಿದ್ಯಾರ್ಥಿಗಳನ್ನು ಆಕರ್ಷಿಸಿ ಸರ್ಕಾರಿ ಶಾಲೆಯ ಗುಣಮಟ್ಟ ಹೆಚ್ಚಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು. ಕಡ್ಡಾಯ ಶಿಕ್ಷಣ ಕಾಯ್ದೆ ನಿಯಮಾವಳಿಗೆ ತಿದ್ದುಪಡಿ ತಂದು ಮುಂದಿನ ಶೈಕ್ಷಣಿಕ ವರ್ಷದಿಂದಲೇ ಜಾರಿಗೊಳಿಸಲಾಗುವುದು.

ಪ್ರತಿ ಗ್ರಾಮ, ನಗರ, ವಾರ್ಡ್‌ ವ್ಯಾಪ್ತಿಯಲ್ಲಿ ಇಂತಿಷ್ಟು ಅಂತರದಲ್ಲಿ ಸರ್ಕಾರಿ ಶಾಲೆ ಇಲ್ಲದಿದ್ದರೆ ಅಂತಹ ಸಂದರ್ಭದಲ್ಲಿ ಖಾಸಗಿ ಶಾಲೆಗೆ ಆರ್‌ಟಿಇಯಡಿ ಸೇರ್ಪಡೆಯಾಗಬಹುದು. ಸರ್ಕಾರಿ ಶಾಲೆ ಇದ್ದರೆ ಅಲ್ಲಿಗೆ ಸೇರಿಸುವುದು ಕಡ್ಡಾಯವಾಗಲಿದೆ. ಸಾರ್ವನಿಕ ಶಿಕ್ಷಣ ಇಲಾಖೆ, ಜಿಲ್ಲಾ ಉಪ ನಿರ್ದೇಶಕರ ವತಿಯಿಂದ ಯಾವ್ಯಾವ ಖಾಸಗಿ ಶಾಲೆಗೆ ಆರ್‌ಟಿಇಯಡಿ ಸೇರಿಸಬಹುದು ಎಂಬ ಬಗ್ಗೆಯೂ ಸ್ಥಳೀಯವಾಗಿ ಪ್ರಕಟಣೆ ನೀಡಲಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here