Home Crime ಜೆಡಿಎಸ್ ಕಾರ್ಯಕರ್ತನ ಬರ್ಬರ ಹತ್ಯೆ..! ಗೌರಿಬಿದನೂರಿನ ರಾಜಕೀಯದಲ್ಲಿ ಸದ್ದು ಮಾಡಿದೆ ರೌಡಿಸಂ..! ಶಿವಶಂಕರ್‌ರೆಡ್ಡಿ ಮೇಲೆ...

ಜೆಡಿಎಸ್ ಕಾರ್ಯಕರ್ತನ ಬರ್ಬರ ಹತ್ಯೆ..! ಗೌರಿಬಿದನೂರಿನ ರಾಜಕೀಯದಲ್ಲಿ ಸದ್ದು ಮಾಡಿದೆ ರೌಡಿಸಂ..! ಶಿವಶಂಕರ್‌ರೆಡ್ಡಿ ಮೇಲೆ ಗಂಭೀರ ಆರೋಪ…

663
0
SHARE

ರಾಜಕೀಯ ದ್ವೇಷದ ಹಿನ್ನೆಲೆ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳ ಕಾರ್ಯಕರ್ತರ ನಡುವೆ ಗುಂಪುಘರ್ಷಣೆ ಉಂಟಾಗಿ ಓರ್ವ ವ್ಯಕ್ತಿ ಮೃತಪಟ್ಟು ಹತ್ತಕ್ಕೂ ಹೆಚ್ಚು ಜನರಿಗೆ ಗಂಭಿರ ಗಾಯಗೊಂಡ ಘಟನೆ ಚಿಕ್ಕಬಳ್ಳಾಫುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಕೋಟಾಲದಿನ್ನೆ ಗ್ರಾಮದ ಬಳಿ ನಡೆದಿದೆ..

ದುಷ್ಕರ್ಮಿಗಳು ಲಾಂಗು ಮಚ್ಚುಗಳಿಂದ ಮನಸೋಇಚ್ಚೆ ಹಲ್ಲೆ ನಡೆಸಿದ್ರಿಂದ ಗೌರೀಬಿದನೂರು ತಾಲ್ಲೂಕಿನ ಉಪ್ಪಾರಹಳ್ಳಿ ಗ್ರಾಮದ 25 ವರ್ಷದ ರಾಮಿರೆಡ್ಡಿ ರಕ್ತದ ಮಡುವಿನಲ್ಲಿ ಸಾವನ್ನಪ್ಪಿದ್ದಾನೆ.. ಇನ್ನು ತೀವ್ರ ಗಂಭೀರಗಾಯಗೊಂಡಿರುವ ನರೇಂದ್ರರೆಡ್ಡಿ ಮತ್ತಿತರನ್ನು ಗೌರೀಬಿದನೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ…

ಘಟನೆಗೆ ಕಾಂಗ್ರೇಸ್ ಕಾರ್ಯಕರ್ತರಿಂದ ಜೆ.ಡಿ.ಎಸ್ ಕಾರ್ಯಕರ್ತರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರೋದಾಗಿ ಆರೋಪಿಸಲಾಗಿದೆ.. ಘಟನೆ ನಡೆಯುತ್ತಿದ್ದಂತೆ ಸಾವಿರಾರು ಜನ ಜೆಡಿಎಸ್ ಕಾರ್ಯಕರ್ತರು ಜಮಾಯಿಸಿ ಆರೋಪಿಗಳನ್ನು ಬಂದಿಸುವಂತೆ ಪೊಲೀಸರ ಹಾಗೂ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದು ಪೊಲೀಸ್ ಜೀಪ್ ಜಖಂಗೊಂಡಿದೆ…

ಸಧ್ಯ ಗೌರಿಬಿದನೂರು ತಾಲೂಕು ಆಸ್ಪತ್ರೆ ಬಳಿ ಉದ್ವಿಘ್ನ ಪರಿಸ್ಥಿತಿ ಉಂಟಾಗಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಹಾಗೂ ಮಿಲಿಟರಿ ಯೋಧರನ್ನು ನಿಯೋಜಿಸಲಾಗಿದೆ..

ಇನ್ನು ವಿದಾನಸಭಾ ಚುನಾವಣೆ ಹಿನ್ನೆಲೆ ಗೌರೀಬಿದನೂರು ವಿದಾನಸಭಾ ಕ್ಷೇತ್ರದಲ್ಲಿ ಜಿದ್ದಾಜಿದ್ದಿನ ರಾಜಕೀಯಕ್ಕೆ ವೇದಿಕೆಯಾಗಿದ್ದು, ಕಾಂಗ್ರೆಸ್ ನ ಅಭ್ಯರ್ಥಿ ಹಾಗೂ ವಿದಾನಸಭಾ ಉಪಸಭಾಧ್ಯಕ್ಷ ಎನ್.ಹೆಚ್.ಶಿವಶಂಕರರೆಡ್ಡಿ ಹಾಗೂ ಅವರ ಬೆಂಬಲಿಗರು ದ್ವೇಷದ ರಾಜಕಾರಣ ಮಾಡಿ ಜೆಡಿಎಸ್ ಕಾರ್ಯಕರ್ತರ ಮೇಲೆ ರೌಡಿಗಳನ್ನು ಬಿಟ್ಟು ಹಲ್ಲೆ ಮಾಡಿಸಿದ್ದಾರೆ ಅಂತ ಆರೋಪಿಸಲಾಗಿದೆ…

 

LEAVE A REPLY

Please enter your comment!
Please enter your name here