Home District ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಅಮಾನವೀಯ ಕೃತ್ಯ..! ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಬೆತ್ತಲೆ ಮೆರವಣಿಗೆ..!

ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಅಮಾನವೀಯ ಕೃತ್ಯ..! ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಬೆತ್ತಲೆ ಮೆರವಣಿಗೆ..!

664
0
SHARE

ದೇವಸ್ಥಾನ ಅಪವಿತ್ರಗೊಳಿಸಿದ ಎಂಬ ಕಾರಣಕ್ಕೆ ಮಾನಸಿಕ ಅಸ್ವಸ್ಥ, ದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಬೆತ್ತಲೆ ಮೆರವಣಿಗೆ ಮಾಡಿರುವ ಘಟನೆ ಗುಂಡ್ಲುಪೇಟೆಯಲ್ಲಿ ನಡೆದಿದೆ. ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಕಬ್ಬೆಕಟ್ಟೆ ಗ್ರಾಮದಲ್ಲಿ ಈ ಕೃತ್ಯ ನಡೆದಿದ್ದು, ಈ ಸಂಬಂಧ ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ.

ಕಬ್ಬೆಕಟ್ಟೆ ಶನೇಶ್ವರ ದೇವಸ್ಥಾನದ ಅರ್ಚಕ ಶಿವಪ್ಪ, ಬಸವರಾಜು, ಮಾಣಿಕ್ಯ, ಸತೀಶ್‌, ಮೂರ್ತಿ ಮತ್ತು ಪುಟ್ಟಸ್ವಾಮಿ ವಿರುದ್ಧ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಅರ್ಚಕ ಶಿವಪ್ಪ ಹಾಗೂ ಪುಟ್ಟಸ್ವಾಮಿ ಬಂಧಿತರಾಗಿದ್ದು. ಉಳಿದ ನಾಲ್ವರು ತಲೆ ಮರೆಸಿಕೊಂಡಿದ್ದಾರೆ. ಹಲ್ಲೆಗೊಳಗಾದ ಪ್ರತಾಪ್‌ ಅವರ ಚಿಕ್ಕಪ್ಪನ ಮಗ ಕಾಂತರಾಜು ಅವರು ನೀಡಿರುವ ದೂರಿನ ಆಧಾರದ ಮೇಲೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಇದೇ ತಿಂಗಳ 3ರಂದು ಘಟನೆ ನಡೆದಿದ್ದು 11 ಮೇ ತಾರೀಖಿನಂದು ದೂರು ದಾಖಲಿಸಲಾಗಿದೆ.

ದೇವಸ್ಥಾನ ಅಪವಿತ್ರಗೊಳಿಸಿದ ಎಂಬ ಕಾರಣಕ್ಕೆ ಪ್ರತಾಪ್‌ನ ಜಾತಿ ನಿಂದನೆ ಮಾಡಿ, ಬೆತ್ತಲೆ ಗೊಳಿಸಿ, ಸಾರ್ವಜನಿಕ ರಸ್ತೆಯಲ್ಲಿ ಮೆರವಣಿಗೆ ಮಾಡಲಾಗಿದೆ. ಹಲ್ಲೆಗೊಳಗಾದ ಮಾನಸಿಕ ಅಸ್ವಸ್ಥ ಪ್ರತಾಪ್ ದಲಿತ ವರ್ಗದವರಾಗಿದ್ದು, ಗುಂಡ್ಲುಪೇಟೆ ತಾಲ್ಲೂಕಿನ ಶ್ಯಾನಾಡ್ರಹಳ್ಳಿಯವರಾದರೂ ಮೈಸೂರಿನಲ್ಲಿ ವಾಸವಿದ್ದಾರೆ. ಪ್ರತಾಪ್‌ ಅವರು ಜೂನ್‌ 3ರಂದು ಕಬ್ಬೆಕಟ್ಟೆ ಶನೇಶ್ವರ ದೇವಸ್ಥಾನದಲ್ಲಿ ವಿಗ್ರಹಗಳನ್ನು ಧ್ವಂಸ ಮಾಡಿರುವ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಸ್ವಾಮಿಗೌಡ ಅವರು ಜೂನ್‌ 7ರಂದು ಗುಂಡ್ಲುಪೇಟೆ ಪಟ್ಟಣ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

‘ದೇವಸ್ಥಾನದಲ್ಲಿರುವಾಗಲೇ ಪ್ರತಾಪ್‌ ಅವರ ಮೈಮೇಲೆ ಬಟ್ಟೆಗಳಿರಲಿಲ್ಲ. ಬಟ್ಟೆ ನೀಡಲು ಹೋದರೆ ಗ್ರಾಮಸ್ಥರಿಗೆ ಹೊಡೆಯಲು ಬಂದಿದ್ದು ಮಾತ್ರವಲ್ಲದೇ ಕೆಳಗಡೆಗೆ ತಳ್ಳಿದ್ದಾರೆ. ಎಲ್ಲರ ಮೇಲೂ ರೇಗಾಡಿದಾಗ ಕೈಯನ್ನು ಹಗ್ಗದಲ್ಲಿ ಕಟ್ಟಿ ಒಂದು ಕಡೆ ಕೂರಿಸಿ ಪೊಲೀಸರಿಗೆ ಮಾಹಿತಿ ತಿಳಿಸಲಾಯಿತು’ ಎಂದು ಅವರು ದೂರಿನಲ್ಲಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here