Home Cinema ಚಾಮುಂಡೇಶ್ವರಿಯಲ್ಲಿ ಸಿಎಂ ಸಿದ್ದರಾಮಯ್ಯ ಪರ ದರ್ಶನ್ ಪ್ರಚಾರಕ್ಕೆ ಜೆಡಿಎಸ್ ಕಾರ್ಯಕರ್ತರಿಂದ ವಿರೋಧ..! ಬಿಗುವಿನ ವಾತಾವರಣ ಲಾಠಿಚಾರ್ಜ್..!?

ಚಾಮುಂಡೇಶ್ವರಿಯಲ್ಲಿ ಸಿಎಂ ಸಿದ್ದರಾಮಯ್ಯ ಪರ ದರ್ಶನ್ ಪ್ರಚಾರಕ್ಕೆ ಜೆಡಿಎಸ್ ಕಾರ್ಯಕರ್ತರಿಂದ ವಿರೋಧ..! ಬಿಗುವಿನ ವಾತಾವರಣ ಲಾಠಿಚಾರ್ಜ್..!?

1113
0
SHARE

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಚುನಾವಣಾ ಕದನ ಕಣ ರಂಗಾಗಿದೆ. ಮೂರು ದಿನಗಳ ಹಿಂದಷ್ಟೇ ಸಿಎಂ ಸಿದ್ದರಾಮಯ್ಯ ಪರ ನಟಿ ಜಯಮಾಲ, ಮುಖ್ಯಮಂತ್ರಿ ಚಂದ್ರು, ನಿನ್ನೆ ಬಾಲಿವುಡ್ ನಟ ರಾಜ್ ಬೊಬ್ಬರ್ ಪ್ರಚಾರ ನಡೆಸಿದ ಬೆನ್ನಲ್ಲೇ ಇಂದು ಸ್ಯಾಂಡಲ್‌ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ ನಡೆಸಿದ್ರು.

ಆದ್ರೆ, ಕಾಂಗ್ರೆಸ್ ಪರ ಪ್ರಚಾರ ಮಾಡುವುದಕ್ಕೆ ಕ್ಷೇತ್ರದ ನಾಗನಹಳ್ಳಿ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ರು. ಕಾವೇರಿ ಹೋರಾಟದಲ್ಲಿ ರೈತರ ಪರ ಹೋರಾಡದ ದರ್ಶನ್ ಚುನಾವಣೆಯಲ್ಲಿ ಪ್ರಚಾರ ಮಾಡಬಾರದು ಎಂದು ದರ್ಶನ್ ವಿರುದ್ದ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು.

ದರ್ಶನ್ ಪ್ರಚಾರ ಮಾಡುವುದನ್ನು ವಿರೋಧಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಂತೆ ಇದೇ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರೂ ಕೂಡಾ ಪ್ರತಿಯಾಗಿ ಪ್ರತಿಭಟನೆ ಮಾಡಿದ್ರು. ಪರಿಣಾಮ ಗ್ರಾಮದಲ್ಲಿ ಕೆಲ ಕಾಲ ಬಿಗುವಿನ ವಾತಾರಣ ಉಂಟಾಯಿತು.

ಪರಿಸ್ಥಿತಿ ವಿಕೋಪಕ್ಕೆ ತೆರಳುತ್ತಿದ್ದಂತೆ ಪೊಲೀಸರು ಲಘು ಲಾಠಿಚಾರ್ಜ್ ಮಾಡಿ ವಾತಾವರಣ ತಿಳಿಗೊಳಿಸಿದ್ರು. ಚಾಮುಂಡೇಶ್ವರಿ ಕ್ಷೇತ್ರದ ನಾಗನಹಳ್ಳಿ ಗ್ರಾಮದಲ್ಲಿ ವಿರೋಧದ ನಡುವೆಯೂ ಗ್ರಾಮಕ್ಕೆ ಆಗಮಿಸಿದ ನಟ ದರ್ಶನ್ , ಸಿಎಂ ಸಿದ್ದರಾಮಯ್ಯಗೆ ಮತ ಹಾಕುವಂತೆ ಮನವಿ ಮಾಡಿದ್ರು.

ಈ ವೇಳೆ ದರ್ಶನ್‌ಗೆ ಗ್ರಾಮಸ್ಥರಿಂದ ಅದ್ದೂರಿ ಸ್ವಾಗತ ವ್ಯಕ್ತವಾಯಿತು. ಹಸಿರು ಟವಲ್ ಹಾಕಿ ತೆರದ ವಾಹನದಲ್ಲಿ ರೋಡ್ ಶೋ ಮಾಡಿದ್ರು. ನಾಗನಗಳ್ಳಿ ನಂತರ ರಮ್ಮನಹಳ್ಳಿ, ಬೆಲವವತ್ತ, ಹಿನಕಲ್, ಹೂಟಗಳ್ಳಿ, ಬೆಳವಾಡಿ ಸೇರಿದಂತೆ ೩೩ ಗ್ರಾಮಗಳಲ್ಲಿ ಪ್ರಚಾರ ಮಾಡಿದ್ರು.

LEAVE A REPLY

Please enter your comment!
Please enter your name here