Home District ಜೆಡಿಎಸ್ -ಕಾಂಗ್ರೆಸ್ ಮೈತ್ರಿಕೂಟದಲ್ಲಿ ಸಚಿವ ಸ್ಥಾನಕ್ಕೆ ಹಗ್ಗಜಗ್ಗಾಟ..!!! ಕಾಂಗ್ರೆಸ್‌ಗೆ 2 ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಪಟ್ಟು…

ಜೆಡಿಎಸ್ -ಕಾಂಗ್ರೆಸ್ ಮೈತ್ರಿಕೂಟದಲ್ಲಿ ಸಚಿವ ಸ್ಥಾನಕ್ಕೆ ಹಗ್ಗಜಗ್ಗಾಟ..!!! ಕಾಂಗ್ರೆಸ್‌ಗೆ 2 ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಪಟ್ಟು…

2721
0
SHARE

ಜೆಡಿಎಸ್ -ಕಾಂಗ್ರೆಸ್ ಮೈತ್ರಿಕೂಟದಲ್ಲಿ ಸಚಿವ ಸ್ಥಾನಕ್ಕೆ ಹಗ್ಗಜಗ್ಗಾಟ ಶುರುವಾಗಿದೆ. ಕಾಂಗ್ರೆಸ್‌ಗೆ ಎರಡು ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಪಟ್ಟು ಹಿಡಿದಿದೆ. ದಲಿತರು ಮತ್ತ ಲಿಂಗಾಯತರಿಗೆ ತಲಾ ಒಂದೊಂದು ಉಪ ಮುಖ್ಯಮಂತ್ರಿ ಸ್ಥಾನ ನೀಡಲು ಕಾಂಗ್ರೆಸ್ ಮುಂದಾಗಿದೆ…ದಲಿತ ಕೋಟಾದಡಿ ಡಾ.ಜಿ ಪರಮೇಶ್ವರ್, ಲಿಂಗಾಯತರ ಕೋಟಾದಡಿ ಶಾಮನೂರು ಶಿವಶಂಕರಪ್ಪ ಅಥವಾ ಎಂ.ಬಿ.ಪಾಟೀಲ್‌ಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಚಿಂತನೆ ನಡೆಸಿದೆ. ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತರ ಮಾನ್ಯತೆ ನೀಡುವ ವಿಚಾರದಲ್ಲಿ ಈಗಾಗಲೇ ಕಾಂಗ್ರೆಸ್ ತೀವ್ರ ಮುಖಭಂಗ ಅನುಭವಿಸಿದೆ… ಕಾಂಗ್ರೆಸ್‌ ಮೇಲೆ ಲಿಂಗಾಯತ ಸಮುದಾಯ ಕೂಡ ಅಸಮಾಧಾನಗೊಂಡಿದೆ. ಅಸಮಾಧಾನ ಶಮನಗೊಳಿಸಲು ಲಿಂಗಾಯತರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ಕಾಂಗ್ರೆಸ್ ಮುಂದಾಗಿದೆ. ಆದ್ರೆ, ಕಾಂಗ್ರೆಸ್‌ನ ಎರಡು ಉಪಮುಖ್ಯಮಂತ್ರಿ ಸ್ಥಾನಗಳ ಪ್ರಸ್ತಾವನೆ ಬಗ್ಗೆ ಜೆಡಿಎಸ್ ಈವರೆಗೂ ಸಮ್ಮತಿ ಸೂಚಿಸಿಲ್ಲ…ಈ ನಡುವೆ, ಇಂದು ನಿಯೋಜಿತ ಮುಖ್ಯಮಂತ್ರಿ ಕುಮಾರಸ್ವಾಮಿ , ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಜೊತೆ ಮಾತುಕತೆ ನಡೆಸಲಿದ್ದಾರೆ. ಕುಮಾರಸ್ವಾಮಿ ಜೊತೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಮಾತ್ರ ದೆಹಲಿಗೆ ತೆರಳುತ್ತಿದ್ದಾರೆ…

LEAVE A REPLY

Please enter your comment!
Please enter your name here