Home Elections 2019 “ನಾನು ಪುಟ್ಬಾಲ್ ಆಡುವವನಲ್ಲ, ಚೆಸ್ ಆಡಿ ಚೆಕ್ ಕೊಡುವವನು” ಡಿಸಿಎಂ ಪಟ್ಟ ಸಿಗದಿದ್ದಕ್ಕೆ ಡಿ.ಕೆ.ಶಿವಕುಮಾರ್ ಫುಲ್...

“ನಾನು ಪುಟ್ಬಾಲ್ ಆಡುವವನಲ್ಲ, ಚೆಸ್ ಆಡಿ ಚೆಕ್ ಕೊಡುವವನು” ಡಿಸಿಎಂ ಪಟ್ಟ ಸಿಗದಿದ್ದಕ್ಕೆ ಡಿ.ಕೆ.ಶಿವಕುಮಾರ್ ಫುಲ್ ಗರಂ ಹೇಳಿಕೆ…

1806
0
SHARE

ಕಾಂಗ್ರೆಸ್‌ನ ಆಪತ್ಬಾಂದವ ಎಂದೇ ಕರೆಯುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅಸಮಾಧಾನಗೊಂಡಿದ್ದಾರೆ. ಉಪಮುಖ್ಯಮಂತ್ರಿ ಪಟ್ಟ ಕೈ ತಪ್ಪಿರೋದಕ್ಕೆ ಪರೋಕ್ಷವಾಗಿ ಹಿರಿಯ ನಾಯಕರ ಮೇಲೆ ಗರಂ ಆಗಿದ್ದಾರೆ. ಉಪಮುಖ್ಯಮಂತ್ರಿಯಾಗಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರೋ ಡಾ.ಜಿ.ಪರಮೇಶ್ವರ್ ಮೇಲೆ ಪರೋಕ್ಷವಾಗಿ ಅಸಮಾಧಾನಗೊಂಡಿದ್ದಾರೆ…

ಸಮ್ಮಿಶ್ರ ಸರ್ಕಾರ ರಚನೆಯಲ್ಲಿ ಡಿ.ಕೆ.ಶಿವಕುಮಾರ್ ಮಹತ್ವದ ಪಾತ್ರ ವಹಿಸಿದ್ಧಾರೆ. ಆದರೂ ಪಕ್ಷದಲ್ಲಿನ ಅವರನ್ನು ನಿರ್ಲಕ್ಷ್ಯ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಮೂಲಗಳ ಪ್ರಕಾರ, ಸಚಿವ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಪಟ್ಟು ಹಿಡಿದಿದ್ದಾರೆ…

ಹೈಕಮಾಂಡ್‌ಗೆ ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಲಾಗಿದೆ. ತಮ್ಮ ನಿವಾಸದಲ್ಲಿ ಮಾತನಾಡಿದ ಶಿವಕುಮಾರ್, ನಾನು ಪುಟ್ಬಾಲ್ ಆಡುವವನಲ್ಲ, ಚೆಸ್ ಆಡಿ ಚೆಕ್ ಕೊಡುವವನು-ನನ್ನ ಹಣೆ ಬರಹ ಏನು ಎಂಬುದು ನನಗೆ ಗೊತ್ತಿದೆ-ನೋಡೋಣ ಯಾವ ಸ್ಥಾನಮಾನ ಸಿಗುತ್ತದೆ ಎಂದು ಕಾದು ನೋಡೋಣ ಎಂದರು…

ನಾನೇನು ರಾಜಕೀಯ ಸನ್ಯಾಸತ್ವ ತೆಗೆದುಕೊಳ್ಳಲ್ಲ. ದೇಶ ನೋಡುವಂತೆ ನಾನು ಮುಖ್ಯಮಂತ್ರಿಗಳ ಕೈ ಎತ್ತಿದ್ದೇನೆ- ಅವರೀಗ ಈ ಕೈ ಕಾಪಾಡ್ಬೇಕು, ಕಾಪಾಡುವ ವಿಶ್ವಾಸವಿದೆ ಎಂದು ಹೇಳಿದರು. ಇದಾಗ ಬಳಿಕ ಹಿಲ್ಟನ್ ಹೋಟೆಲ್ ಬಳಿ ಮಾತನಾಡಿದ ಡಿ.ಕೆ.ಶಿವಕುಮಾರ್,ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ…

ಇವತ್ತು ಹೆಚ್ ಡಿಕೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.ಹೀಗಾಗಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಆಗಮಿಸಲಿದ್ದಾರೆ ಎಂದರು.ಇನ್ನು, ಮಗಳನ್ನು ನೋಡಲು ಮನೆಗೆ ಹೋಗಿದ್ದೆ.ಹೀಗಾಗಿ ಡಿಕೆಶಿ ಮುನಿಸಿಕೊಂಡಿದ್ದಾರೆ ಎಂಬುದು ಕೇವಲ ಊಹಾಪೋಹ. ಇದು ಮಾಧ್ಯಮ ಇದನ್ನ ಸೃಷ್ಟಿ.ಹೈಕಮಾಂಡ್ ಕೊಟ್ಟ ಜವಾಬ್ದಾರಿ ನಿಭಾಯಿಸುತ್ತೇನೆ. ನಾನೇನು ಕೆಪಿಸಿಸಿ ಅಧ್ಯಕ್ಷ ಸ್ಥಾನ, ಡಿಸಿಎಂ ಸ್ಥಾನ ಕೊಡಿ ಎಂದು ಕೇಳಿರಲಿಲ್ಲ ಎಂದು ತಿಳಿಸಿದ್ದಾರೆ…

LEAVE A REPLY

Please enter your comment!
Please enter your name here