Home Crime ಪುಲ್ವಾಮ ದಾಳಿ ಮಾಸುವ ಮುನ್ನವೇ ಮತ್ತೊಂದು ವಿಧ್ವಂಸಕ ಕೃತ್ಯ..! ಜಮ್ಮು ಹೃದಯಭಾಗದ ಬಸ್ ನಿಲ್ದಾಣದಲ್ಲಿ ಗ್ರೆನೇಡ್...

ಪುಲ್ವಾಮ ದಾಳಿ ಮಾಸುವ ಮುನ್ನವೇ ಮತ್ತೊಂದು ವಿಧ್ವಂಸಕ ಕೃತ್ಯ..! ಜಮ್ಮು ಹೃದಯಭಾಗದ ಬಸ್ ನಿಲ್ದಾಣದಲ್ಲಿ ಗ್ರೆನೇಡ್ ದಾಳಿ ಓರ್ವ ನಾಗರಿಕ ಸಾವು, 32ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

382
0
SHARE

ಪುಲ್ವಾಮದಲ್ಲಿ ಉಗ್ರರು ವಿಧ್ವಂಸಕ ದಾಳಿ ನಡೆಸಿದ ಕೃತ್ಯ ಮಾಸುವ ಮುನ್ನವೇ ಜಮ್ಮುವಿನಲ್ಲಿ ಮತ್ತೊಂದು ವಿಧ್ವಂಸಕ ಕೃತ್ಯ ನಡೆಸಿದ್ದಾರೆ. ಜಮ್ಮು ಹೃದಯ ಭಾಗದಲ್ಲಿರುವ ಬಸ್ ನಿಲ್ದಾಣದಲ್ಲಿ ಗ್ರೆನೇಡ್ ದಾಳಿ ನಡೆಸಿ ಓರ್ವ ನಾಗರಿಕರನ್ನು ಬಲಿ ಪಡೆದಿದ್ದು, 30ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ.

ಇನ್ನು ಗ್ರೆನೇಡ್ ದಾಳಿ ಸಂಬಂಧ ಭದ್ರತಾ ಪಡೆ ತನಿಖೆ ಚುರುಕುಗೊಳಿಸಿದ್ದು, 10ಕ್ಕೂ ಹೆಚ್ಚು ಮಂದಿ ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದ್ದಾರೆ.ಪುಲ್ವಾಮ ಉಗ್ರರ ದಾಳಿ ಮಾಸುವ ಮುನ್ನವೇ ಜಮ್ಮುವಿನಲ್ಲಿ ಮತ್ತೊಂದು ವಿಧ್ವಂಸಕ ಕೃತ್ಯ ನಡೆದಿದೆ. ಜಮ್ಮು ಹೃದಯಭಾಗದಲ್ಲಿರುವ ಬಸ್ ನಿಲ್ದಾಣದಲ್ಲಿ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದಾರೆ. ಉಗ್ರರು ನಡೆಸಿದ ಗ್ರೆನೇಡ್‌ ದಾಳಿಗೆ ಓರ್ವ ನಾಗರಿಕ ಬಲಿಯಾಗಿದ್ದು 30 ಜನರಿಗೆ ಗಾಯಗಳಾಗಿವೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಐವರ ಸ್ಥಿತಿ ಗಂಭೀರವಾಗಿದೆ.

ಇನ್ನು ಉಗ್ರರು ಜಮ್ಮು-ಕಾಶ್ಮೀರವನ್ನು ಟಾರ್ಗೆಟ್ ಮಾಡಿಕೊಂಡಿದ್ದು ಕಾಶ್ಮೀರದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಬಸ್ ನಿಲ್ದಾಣದ ಬಳಿ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು. ಗ್ರೆಗೇಡ್ ದಾಳಿಯ ಬಗ್ಗೆ ಸಂಪೂರ್ಣ ತನಿಖೆ ನಡೆಸಲಾಗುತ್ತಿದೆ. ಈಗಾಗಲೇ 10 ಜನ ಶಂಕಿತ ಉಗ್ರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಸ್ಥಳದಲ್ಲಿದ್ದ ಸಿಸಿಟಿವಿ ಫುಟೇಜ್ ಗಳನ್ನು ಬಳಸಿಕೊಂಡು ತನಿಖೆ ನಡೆಸುತ್ತಿದ್ದಾರೆ.ಮಧ್ಯಾಹ್ನದ ವೇಳೆಗೆ ಜಮ್ಮುವಿನಿಂದ ದೆಹಲಿಗೆ ಸಾರಿಗೆ ಬಸ್ ತೆರಳುತ್ತಿತ್ತು.

ಕಳೆದ ವರ್ಷ ಮೇನಿಂದಾಚೆಗೆ ಜಮ್ಮು ಬಸ್ ನಿಲ್ದಾಣದಲ್ಲಿ ಉಗ್ರರು ನಡೆಸಿರುವ ಮೂರನೇಯ ಗ್ರೆನೇಡ್ ಸ್ಪೋಟ ಇದಾಗಿದೆ. ನಗರದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿಗೆ ಭಂಗ ತರುವಂತಹ ನಿಟ್ಟಿನಲ್ಲಿ ಈ ಸ್ಪೋಟ ನಡೆಸಿರುವ ಸಾಧ್ಯತೆ ಎಂಬುದು ತಿಳಿದುಬಂದಿದೆ.ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸರ್ಕಾರಿ ವೈದ್ಯಕೀಯ ಕಾಲೇಜ್ ಆಸ್ಪತ್ರೆಯ ಪ್ರಿನ್ಸಿಪಾಲ್ ಸುನಂದಾ ರೈನಾ ಹೇಳಿದ್ದಾರೆ.

ಇಂದು ಮಧ್ಯಾಹ್ನ ಕೆಲವರು ಗ್ರೆನೇಡ್ ಸ್ಪೋಟ ನಡೆಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಸ್ಪೋಟ ಸಂಭವಿಸಿದ ಬಿ ಸಿ ರಸ್ತೆಯನ್ನು ಬಂದ್ ಮಾಡಲಾಗಿದೆ. ಗ್ರೆನೇಡ್ ಎಸೆದವರ ಹುಡುಕಾಟ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.ಘಟನೆಯಲ್ಲಿ ಪಾರ್ಕಿಂಗ್ ಮಾಡಲಾಗಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಹಾನಿಯಾಗಿದ್ದು, ರಾಜ್ಯಾದ್ಯಂತ ಹೈ ಆಲರ್ಟ್ ಘೋಷಿಸಲಾಗಿದೆ. ತಪಾಸಣೆ ಕಾರ್ಯವನ್ನು ಚುರುಕುಗೊಳಿಸಲಾಗಿದೆ ಎಂದು ಐಜಿಪಿ ಹೇಳಿದ್ದಾರೆ.

ಕೋಮು ಸೌಹಾರ್ದತೆ ಹಾಗೂ ಶಾಂತಿಗೆ ಭಂಗ ತರುವಂತಹ ನಿಟ್ಟಿನಲ್ಲಿ ಈ ಸ್ಪೋಟ ನಡೆದಿದ್ದು, ಜನರು ಶಾಂತಿ ಕಾಪಾಡುವಂತೆ ತಿಳಿಸಲಾಗಿದೆ. ಪೊಲೀಸರು ಸಾಕ್ಷ್ಯಗಳನ್ನು ಕಲೆ ಹಾಕುತ್ತಿದ್ದಾರೆ. ದಾಳಿ ಕೋರರನ್ನು ಶೀಘ್ರದಲ್ಲಿಯೇ ಬಂಧಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.ಸ್ಪೋಟ ಸಂಭವಿಸಿದ ಕೂಡಲೇ ಜನರು ಪ್ರಾಣಪಾಯದಿಂದ ಓಡಿದ್ದರಿಂದ ಆತಂಕದ ವಾತವಾರಣ ಸೃಷ್ಟಿಯಾಗಿತ್ತು. ನಂತರ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ್ದು, ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಐಜಿಪಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here