Home District ಪ್ರಜ್ವಲ್ ರೇವಣ್ಣ ಮೊದಲ ಬಾರಿಗೆ ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಹೇಳಿದ್ದೇನು ಗೊತ್ತಾ..?!

ಪ್ರಜ್ವಲ್ ರೇವಣ್ಣ ಮೊದಲ ಬಾರಿಗೆ ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಹೇಳಿದ್ದೇನು ಗೊತ್ತಾ..?!

646
0
SHARE

ಮುಂದಿನ ಲೋಕಸಭೆ ಚುನಾವಣೆಗೆ ಸ್ಪರ್ಧೆ ವಿಚಾರ ಸಂಬಂಧ ಪ್ರತಿಕ್ರಿಯೆ ನೀಡಿರುವ ಪ್ರಜ್ವಲ್ ರೇವಣ್ಣ ಮಾಜಿ ಪ್ರಧಾನಿ ದೇವೇಗೌಡರ ನಿರ್ಧಾರವೇ ಅಂತಿಮ. ಹಾಸನ ಲೋಕಸಭಾ ಕ್ಷೇತ್ರದಿಂದ ದೇವೇಗೌಡರೇ ಮತ್ತೊಮ್ಮೆ ಸ್ಪರ್ಧಿಸಬೇಕು…

ಅವರ ನಂತರ ಯಾರನ್ನು ಸೂಚಿಸುತ್ತಾರೋ ಅವರು ಸ್ಪರ್ಧಿಸಲಿದ್ದಾರೆ, ಅವಕಾಶ ಸಿಕ್ಕರೆ ಚುನಾವಣೆಗೆ ಸ್ಪರ್ಧಿಸಿ ಜನರ ಸೇವೆ ಮಾಡುತ್ತೇನೆ. ನಾನು ಪಕ್ಷದ ಶಿಸ್ತಿನ ಸಿಪಾಯಿ ಜೆಡಿಎಸ್ ವರಿಷ್ಠರ ತೀರ್ಮಾನಕ್ಕೆ ಬದ್ಧ ಎಂದು ಹಾಸನದಲ್ಲಿ‌ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ…

ಲೋಕಸಭಾ ಚುನಾವಣೆಗೆ ನಿಲ್ಲಬೇಕೆಂಬ ಬಗ್ಗೆ ನಾನೆಲ್ಲೂ ಮಾತನಾಡಿಲ್ಲ. ದೇವೇಗೌಡರೇ ಈ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಸ್ಪರ್ದೆ ಮಾಡೋ‌ ಅವಕಾಶ ಸಿಕ್ಕರೆ‌ ಖಂಡಿತಾ ಸ್ಪರ್ದೆ ಮಾಡುತ್ತೇನೆ…

ಹಾಸನ ಪುಣ್ಯಭೂಮಿ,ಇಲ್ಲಿ‌‌ ಜನರ ಸೇವೆ ಮಾಡೋ ಅವಕಾಶ ಸಿಕ್ಕರೆ ಖಂಡಿತಾ ಮಾಡುತ್ತೇನೆ. ಅವರಲ್ಲದಿದ್ದರೆ ಮತ್ಯಾರು ಎಂದು ದೇವೇಗೌಡರೇ ನಿರ್ದಾರ ಮಾಡ್ತಾರೆ ಎಂದು ಹೇಳಿದ್ದಾರೆ…

LEAVE A REPLY

Please enter your comment!
Please enter your name here