ಪ್ರಾಂಶುಪಾಲರ ಮನವೊಲಿಕೆಗೆ ಬಗ್ಗದ ಮುಸ್ಲಿಂ ವಿದ್ಯಾರ್ಥಿನಿಯರು: ಹಿಜಾಬ್ ಧಾರಿ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ

ಜಿಲ್ಲೆ ತಂತ್ರಜ್ಞಾನ ರಾಜಕೀಯ ರಾಷ್ಟ್ರೀಯ

ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುರ್ಖಾ ತೊಟ್ಟು ಬಂದಿದ್ದ 22 ಮುಸ್ಲಿಂ ವಿದ್ಯಾರ್ಥಿನಿಯರನ್ನು ಪ್ರಾಧ್ಯಾಪಕರು ತರಗತಿಯಲ್ಲಿ ಕುಳಿತುಕೊಳ್ಳಲು ಅವಕಾಶ ಕೊಡದೇ ಪ್ರತ್ಯೇಕ ಕೊಠಡಿಯಲ್ಲಿ ಇರಿಸಿದ್ದಾರೆ. ಹಿಜಬ್ ತೊಟ್ಟು ಬಂದಿದ್ದ ವಿದ್ಯಾರ್ಥಿನಿಯರಿಗೆ ಪ್ರಾಂಶುಪಾಲರು ಸರ್ಕಾರದ ಆದೇಶದ ಬಗ್ಗೆ ತಿಳಿ ಹೇಳಲು ಪ್ರಯತ್ನಿಸಿದ್ದಾರೆ. ಆದರೆ ವಿದ್ಯಾರ್ಥಿನಿಯರು ತಮ್ಮ ಪಟ್ಟು ಬಿಡದೇ ಹಿಜಬ್ ನಮ್ಮ ಹಕ್ಕು.

ನಾವು ಕೋರ್ಟ್ ಆದೇಶ ನೀಡುವ ವರೆಗೂ ಕಾದು ನೋಡುತ್ತೇವೆ ಎಂದು ತಿಳಿಸಿದ್ದಾರೆ. ಪ್ರಾಂಶುಪಾಲರು ಹಿಜಬ್ ಧರಿಸಿ ಬಂದಿದ್ದ ವಿ ದ್ಯಾರ್ಥಿಗಳಿಗೆ ಕಾಲೇಜಿನ ಸಭಾಂಗಣದ ಕೊಠಡಿಯಲ್ಲಿ ಪ್ರತ್ಯೇಕ ವ್ಯವಸ್ಥೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ವಿದ್ಯಾ ರ್ಥಿನಿಯರು ನಾವು ಹಿಂದಿನಿಂದಲೂ ಹಿಜಬ್ ಧರಿಸಿಯೇ ಕಾಲೇಜಿಗೆ ಬರುತ್ತಿದ್ದೆವು. ಆದರೆ ಈಗ ನಮ್ಮನ್ನು ಬೇರೆ ರೀತಿ ನೋಡುತ್ತಿದ್ದಾರೆ ಎಂದು ಹೇಳಿದ್ದಾರೆ.

Leave a Reply

Your email address will not be published.