Home District ಬೆಳ್ಳಂಬೆಳಗ್ಗೆಯೇ ಜವರಾಯ ಅಟ್ಟಹಾಸ…ಒಂದೇ ಕುಟುಂಬದ ಮೂವರು ಸೇರಿದಂತೆ 4ಮಂದಿ ದಾರುಣವಾಗಿ ಸಾವು

ಬೆಳ್ಳಂಬೆಳಗ್ಗೆಯೇ ಜವರಾಯ ಅಟ್ಟಹಾಸ…ಒಂದೇ ಕುಟುಂಬದ ಮೂವರು ಸೇರಿದಂತೆ 4ಮಂದಿ ದಾರುಣವಾಗಿ ಸಾವು

130
0
SHARE

ಬೆಳ್ಳಂಬೆಳಗ್ಗೆಯೇ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಒಂದೇ ಕುಟುಂಬದ ಮೂವರು ಸೇರಿದಂತೆ 4ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡ-ಹಳಿಯಾಗ ಮಾರ್ಗ ಮಧ್ಯೆ ಮುರಕಟ್ಟಿ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಮಗು ಸೇರಿ ಸ್ಥಳದಲ್ಲಿಯೇ ನಾಲ್ವರು ಸಾವನ್ನಪ್ಪಿದ್ದಾರೆ. ಧಾರವಾಡದ ಕಂಟಿಗಲ್ಲಿ ನಿವಾಸಿಗಳಾದ ಇಮ್ರಾನ್ ಮಕಾಂನದಾರ 38, ಆಫ್ರೀನ ಮಕಾಂನದಾರ 28, ಈ ದಂಪತಿಯ ಮಗಳು ಆಯಿಷಾ 4 ಸೇರಿದಂತೆ ಟಾವೇರಾ ಚಾಲಕ ಸ್ಥಳದಲ್ಲಿ ಸಾವುಗಿಡಾಗಿದ್ದಾರೆ.

ಬೆಳಿಗ್ಗೆ ಧಾರವಾಡದಿಂದ ಹಳಿಯಾಳಕ್ಕೆ ಹೊರಟಿದ್ದ ಟವೇರಾ ಸರ್ಕಾರಿ ಬಸ್ ಡಿಕ್ಕಿ ಹೊಡೆದಿದ್ದು ಟವೇರಾದಲ್ಲಿ ಒಂಬತ್ತು ಜನರಿದ್ದರು. ಒಂಬತ್ತು ಜನರಲ್ಲಿ ಐವರಿಗೆ ಗಂಭೀರ ಗಾಯಗಳಾಗಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆ ಗಾಗಿ ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು ಸ್ಥಳಕ್ಕೆ ಅಳ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here