Home District ಮಂಡ್ಯ ಜಿಲ್ಲೆ ಪಾಂಡವಪುರ ಬಳಿ ಭೀಕರ ಅಪಘಾತ.! ನಾಲೆಗೆ ಖಾಸಗಿ ಬಸ್ ಬಿದ್ದು 25ಕ್ಕೂ ಹೆಚ್ಚು...

ಮಂಡ್ಯ ಜಿಲ್ಲೆ ಪಾಂಡವಪುರ ಬಳಿ ಭೀಕರ ಅಪಘಾತ.! ನಾಲೆಗೆ ಖಾಸಗಿ ಬಸ್ ಬಿದ್ದು 25ಕ್ಕೂ ಹೆಚ್ಚು ಪ್ರಯಾಣಿಕರ ದುರ್ಮರಣ..!

1477
0
SHARE

ನಾಲೆಗೆ ಖಾಸಗಿ ಬಸ್ ಉರುಳಿಬಿದ್ದ ಪರಿಣಾಮ 25ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕನಗರಮರಡಿಯಲ್ಲಿ ನಡೆದಿದೆ. ಪಾಂಡವಪುರದಿಂದ ಮಂಡ್ಯ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ರಸ್ತೆ ಪಕ್ಕದ ವಿಸಿ ನಾಲೆಗೆ ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ, ಶಾಲಾ ಮಕ್ಕಳು ಸೇರಿದಂತೆ 25 ಮಂದಿ ಸಾವನ್ನಪ್ಪಿದ್ದಾರೆ.

ತಡೆಗೋಡೆ ಇಲ್ಲದ ಕಾರಣ ಬಸ್ ನಾಲೆಗೆ ಉರುಳಿ ಬಿದ್ದಿದೆ ಎಂದು ಹೇಳಲಾಗುತ್ತಿದೆ. ರಕ್ಷಣಾ ಕಾರ್ಯ ನಡೆಸಿ ಕೆಲವರನ್ನು ಸ್ಥಳದಲ್ಲಿದ್ದವರು ಮೇಲಕ್ಕೆತ್ತಿದ್ದಾರೆ ಎನ್ನಲಾಗಿದ್ದು, ಹಲವರು ಪ್ರಾಣ ಕಳೆದುಕೊಂಡಿದ್ದಾರೆ.ಸಾವಿನ ಸಂಖ್ಯೆ ಹೆಚ್ಚಾಗುವ ಎಲ್ಲಾ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಬಸ್‌ ನಾಲೆಗೆ ಬಿದ್ದು ಸಂಪೂರ್ಣವಾಗಿ ಮುಳುಗಿ ಹೋದ ಪರಿಣಾಮ ಹೆಚ್ಚಿನ ಪ್ರಯಾಣಿಕರು ಪ್ರಾಣ ಕಳೆದುಕೊಂಡಿದ್ದಾರೆ… ಅಪಘಾತವಾಗುತ್ತಿದಂತೆ ಬಸ್ ಚಾಲಕ ಎಸ್ಕೇಪ್ ಆಗಿದ್ದಾನೆ ಎನ್ನಲಾಗಿದೆ. ಬಸ್‌ ಬಿದ್ದ ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯರು ರಕ್ಷಣಾ ಕಾರ್ಯ ನಡೆಸಿದ್ದಾರೆ. ಕೆಲವರನ್ನು ಸ್ಥಳದಲ್ಲಿದ್ದವರು ಮೇಲಕ್ಕೆತ್ತಿದ್ದಾರೆ ಆದರೆ ಆ ಪೈಕಿ ಬಹುತೇಕರು ಪ್ರಾಣ ಕಳೆದುಕೊಂಡಿದ್ದಾರೆ.

23 ಶವಗಳು ಹೊರಕ್ಕೆ :ಈಗಾಗಲೇ 23 ಶವಗಳನ್ನು ನಾಲೆಯಿಂದ ಹೊರ ತೆಗೆಯಲಾಗಿದ್ದು, ಸ್ಥಳದಲ್ಲಿ ಹೆಣಗಳ ರಾಶಿ ಕಂಡರೆ ಎಂಥಹವರೂ ಬೆಚ್ಚಿ ಬೀಳುವಂತಿದೆ. ಮೃತರ ಸಂಬಂಧಿಕರು ಸ್ಥಳಕ್ಕೆ ದೌಡಾಯಿಸಿದ್ದು ಆಕ್ರಂದನ ಮುಗಿಲು ಮುಟ್ಟಿದೆ. ಮೃತರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ.ಬಸ್ಸನ್ನು ಸ್ಕ್ರೇನ್‌ ಮೂಲಕ ಮೇಲಕ್ಕೆತ್ತಲಾಗುತ್ತಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಎಲ್ಲಾ ಸಾಧ್ಯತೆಗಳಿವೆ..

ಸಿಎಂ ದಿಗ್ಭ್ರಮೆ:ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಅವರು ಘಟನೆಯ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿದ್ದು,ತನ್ನೆಲ್ಲಾ ಕೆಲಸಗಳನ್ನು ಬದಿಕಗೊತ್ತಿ ದುರಂತ ನಡೆದ ಸ್ಥಳಕ್ಕೆ ತೆರಳುತ್ತಿದ್ದಾರೆ. ದುರಂತ ನಡೆದಿರುವ ಹಿನ್ನಲೆಯಲ್ಲಿ ಅಧಿಕಾರಿಗಳಿಗೆ ಸಿಎಂ ಎಚ್‌ಡಿಕೆ ಅವರು ಕರೆ ಮಾಡಿ ಸೂಚನೆಗಳನ್ನು ನೀಡಿದ್ದಾರೆ.

ಇನ್ನೂ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದು ಮಾಡಿ ಹೆಚ್ಡಿಕೆ ಅಪಘಾತ ಸ್ಥಳಕ್ಕೆ ಭೇಟಿ ಮಾಡಿ ಮೃತ ಕುಟುಂಬಸ್ಥರನ್ನ ಭೇಟಿ ಮಾಡಲಿದ್ದಾರೆ.. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಾಜು ಈಗಾಗಲೇ ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.

LEAVE A REPLY

Please enter your comment!
Please enter your name here