Home District ಮಹದಾಯಿ ನ್ಯಾಯಾಧಿಕರಣ ತೀರ್ಪಲ್ಲಿ ಕರ್ನಾಟಕದ್ದೇ ಮೇಲುಗೈ..!! ರಾಜ್ಯದ ಪಾಲಿಗೆ 13.5 TMC ನೀರು…ಹಲವು ವರ್ಷಗಳ ನಂತರ...

ಮಹದಾಯಿ ನ್ಯಾಯಾಧಿಕರಣ ತೀರ್ಪಲ್ಲಿ ಕರ್ನಾಟಕದ್ದೇ ಮೇಲುಗೈ..!! ರಾಜ್ಯದ ಪಾಲಿಗೆ 13.5 TMC ನೀರು…ಹಲವು ವರ್ಷಗಳ ನಂತರ ಮಹದಾಯಿ ನೀರಿನ ನಿರೀಕ್ಷೆ ರೈತರ ಮೊಗದಲ್ಲಿ ಸಂತಸ… “ತೀರ್ಪು ತೃಪ್ತಿ ತಂದಿದೆ”

1858
0
SHARE

ಮಹದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಜೆ.ಎಸ್. ಪಾಂಚಾಲ್ ನೇತೃತ್ವದ ನ್ಯಾಯಮಂಡಳಿ ಅಂತಿಮ ತೀರ್ಪು ಪ್ರಕಟಿಸಿದ್ದು, ಕರ್ನಾಟಕಕ್ಕೆಕುಡಿಯಲು 5.5 ಟಿಎಂಸಿ ನೀರು ಹಂಚಿಕೆ ಮಾಡಿದೆ.

ಮಹದಾಯಿ ಜಲವಿವಾದ ನ್ಯಾಯಮಂಡಳಿಯು ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ ಸೇರಬೇಕಾದ ನೀರನ್ನು ಹಂಚಿಕೆ ಮಾಡಿದ್ದು, ಕರ್ನಾಟಕಕ್ಕೆ ಕುಡಿಯುವ ನೀರಿಗಾಗಿ ಕೇವಲ 5.5 ಟಿಎಂಸಿ ಹಂಚಿಕೆ ಮಾಡಿದೆ. ಈ ಪೈಕಿ ಮಲಪ್ರಭಾ ಡ್ಯಾಂಗೆ 4 ಟಿಎಂಸಿ ನೀರು ಬಿಡಬೇಕು ಎಂದು ಹೇಳಿದೆ.

ಕರ್ನಾಟಕಕ್ಕೆ ಒಟ್ಟು 13.07 ಟಿಎಂಸಿ ನೀರು ಹಂಚಿಕೆ ಮಾಡಿದ್ದು, ಕಳಸಾ ನಾಲೆಯಿಂದ 1.72 ಟಿಎಂಸಿ, ಬಂಡೂರಿ ನಾಲೆಯಿಂದ 2.18 ಟಿಎಂಸಿ ಹಾಗೂ ವಿದ್ಯುಚ್ಛಕ್ತಿಗೆ ಉತ್ಪಾದನೆಗೆ 8.02 ಟಿಎಂ ನೀರು ಹಂಚಿಕೆ ಮಾಡಲಾಗಿದೆ.

ಕುಡಿಯುವ ಉದ್ದೇಶಕ್ಕಾಗಿ 7.5 ಟಿಎಂಸಿ ನೀರು ಹಂಚಿಕೆ ಮಾಡುವಂತೆ ಕರ್ನಾಟಕ, ನ್ಯಾಯಮಂಡಳಿಗೆ ಮನವಿ ಮಾಡಿತ್ತು.ಮಹದಾಯಿಯಲ್ಲಿಯ 200 ಟಿಎಂಸಿ ಅಡಿ ನೀರಿನಲ್ಲಿ ಕೇವಲ 9 ಟಿಎಂಸಿ ಅಡಿ ನೀರನ್ನು ಗೋವಾ ಬಳಸಿಕೊಳ್ಳುತ್ತಿದೆ.

ಇನ್ನುಳಿದ ನೀರು ವ್ಯರ್ಥವಾಗಿ ಸಮುದ್ರ ಸೇರುತ್ತಿದೆ. ಕರ್ನಾಟಕದಲ್ಲಿ ಹರಿಯುವ 45 ಟಿಎಂಸಿ ಅಡಿ ನೀರಿನ ಪೈಕಿ ನಾವು 14.98 ಟಿಎಂಸಿ ಅಡಿ ನೀರನ್ನು ಕೇಳುತ್ತಿದ್ದೇವೆ ಎಂದು ಕರ್ನಾಟಕ ವಾದ ಮಂಡಿಸಿತ್ತು.

LEAVE A REPLY

Please enter your comment!
Please enter your name here