Home District ಮಾಜಿ ಉಪ ಮುಖ್ಯಮಂತ್ರಿ ಎಂ.ಪಿ.ಪ್ರಕಾಶ್ ಅವರ ಪುತ್ರ, ಹರಪ್ಪನಹಳ್ಳಿಯ ಮಾಜಿ ಶಾಸಕ ಎಂ.ಪಿ.ರವೀಂದ್ರ ಬಹು ಅಂಗಾಂಗ...

ಮಾಜಿ ಉಪ ಮುಖ್ಯಮಂತ್ರಿ ಎಂ.ಪಿ.ಪ್ರಕಾಶ್ ಅವರ ಪುತ್ರ, ಹರಪ್ಪನಹಳ್ಳಿಯ ಮಾಜಿ ಶಾಸಕ ಎಂ.ಪಿ.ರವೀಂದ್ರ ಬಹು ಅಂಗಾಂಗ ವೈಫಲ್ಯದಿಂದ ವಿಧಿವಶ..

2207
0
SHARE

ಹರಪ್ಪನಹಳ್ಳಿಯ ಮಾಜಿ ಶಾಸಕ ಎಂ.ಪಿ.ರವೀಂದ್ರ ವಿಧಿವಶರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಎಂ.ಪಿ. ರವೀಂದ್ರ ಇಂದು ಬೆಳಗಿನ ಜಾವ 3.30ರ ಸಂದರ್ಭದಲ್ಲಿ ಕೊನೆಯುಸಿರೆಳೆದಿದ್ದು, ಅವರ ಸಾವಿಗೆ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ.ಮೂರು ದಿನಗಳ ಹಿಂದೆ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ರವೀಂದ್ರ ಅವರನ್ನು ನಗರದ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಾಜಿ ಉಪ ಮುಖ್ಯಮಂತ್ರಿ ಎಂ.ಪಿ.ಪ್ರಕಾಶ್ ಅವರ ಪುತ್ರರಾಗಿದ್ದ ರವೀಂದ್ರ ದಾವಣಗೆರೆಯ ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಗೆದ್ದು ಶಾಸಕರಾಗಿದ್ದರು. 2013 ರ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದ್ದ ಅವರು, 2018 ರ ವಿಧಾನಸಭೆಯಲ್ಲಿ ಹರಪನಹಳ್ಳಿಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲುಂಡಿದ್ದರು. ಅಲ್ಲದೆ ಮಾಜಿ ಸಿಎಂ ಸಿದ್ದರಾಮಯ್ಯರ ಆಪ್ತ ವಲಯದಲ್ಲಿ ರವೀಂದ್ರ ಗುರುತಿಸಿಕೊಂಡಿದ್ದರು.

ಶಾಸಕರಾಗಿದ್ದಲೇ ರವೀಂದ್ರ ಅವರ ಆರೋಗ್ಯದ ಹದಗೆಟ್ಟಿತ್ತು. ಈ ಹಿನ್ನೆಲೆಯಲ್ಲಿ ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಎಂ.ಪಿ.ರವೀಂದ್ರರ ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನ 12 ಗಂಟೆಗೆ ಹೂವಿನಹಡಗಲಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here