Home Elections 2018 ಯೋಗಿ ಆದಿತ್ಯನಾಥ್ ಕರ್ನಾಟಕಕ್ಕೆ ಬಂದರೆ ಚಪ್ಪಲಿಯಲ್ಲಿ ಹೊಡೆಯಿರಿ..! ಮಾತಿನ ಭರದಲ್ಲಿ ನಾಲಿಗೆ ಹರಿಬಿಟ್ಟ ದಿನೇಶ್ ಗುಂಡೂರಾವ್

ಯೋಗಿ ಆದಿತ್ಯನಾಥ್ ಕರ್ನಾಟಕಕ್ಕೆ ಬಂದರೆ ಚಪ್ಪಲಿಯಲ್ಲಿ ಹೊಡೆಯಿರಿ..! ಮಾತಿನ ಭರದಲ್ಲಿ ನಾಲಿಗೆ ಹರಿಬಿಟ್ಟ ದಿನೇಶ್ ಗುಂಡೂರಾವ್

451
0
SHARE


ಮಾತು ಆಡಿದರೆ ಹೋಯಿತು, ಮುತ್ತು ಒಡೆದರೆ ಹೋಯಿತು ಅನ್ನೋದು ನಮ್ಮ ರಾಜಕಾರಣಿಗಳಿಗೆ ಗೊತ್ತೇ ಇಲ್ಲ ಅನ್ಸತ್ತೆ. ಮತ್ತೊಬ್ಬ ರಾಜಕಾರಣಿಯನ್ನು ಟೀಕೆಸೋ ಭರದಲ್ಲಿ ನಾಲಿಗೆ ಹರಿಬಿಟ್ಟು ತಾವೇ ತಮ್ಮ ಗೌರವ ಕಡಿಮೆ ಮಾಡಿಕೊಳ್ತಾರೆ. ಇದೀಗ ಈ ಸಾಲಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದ್ದಾರೆ.

ಉತ್ತರ ಪ್ರದೇಶದ ಉನ್ನಾವ್ ಮತ್ತು ಜಮ್ಮು ಕಾಶ್ಮೀರದ ಕಥುವಾದಲ್ಲಿ ನಡೆದ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ಬೆಂಗಳೂರಿನ ಮೌರ್ಯ ಸರ್ಕಲ್‌ನ ಗಾಂಧಿ ಪ್ರತಿಮೆ ಬಳಿ ನಿನ್ನೆ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆ ಸಂದರ್ಭದಲ್ಲಿ ದಿನೇಶ್ ಗುಂಡೂರಾವ್ ನಾಲಗೆ ಹರಿಬಿಟ್ಟಿದ್ದಾರೆ. ಈ ವೇಳೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಟೀಕಾ ಪ್ರಹಾರವನ್ನು ನಡೆಸಿದ ಅವರು, ಯೋಗಿ ಆದಿತ್ಯನಾಥ್ ಕರ್ನಾಟಕಕ್ಕೆ ಬಂದರೆ ಚಪ್ಪಲಿಯಲ್ಲಿ ಹೊಡೆಯಿರಿ ಅಂತ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಯೋಗಿ ಮುಖ್ಯಮಂತ್ರಿ ಸ್ಥಾನದಲ್ಲಿ ಇರಲು ಅರ್ಹರಲ್ಲ. ಕೂಡಲೇ ಪ್ರಧಾನಿ ನರೇಂದ್ರ ಮೋದಿ ಅವರು ಯೋಗಿ ಅವರನ್ನು ಸಿಎಂ ಸ್ಥಾನದಿಂದ ಕಿತ್ತೊಗೆಯಬೇಕು. ಅದಿತ್ಯನಾಥ್ ಕರ್ನಾಟಕಕ್ಕೆ ಬಂದರೆ ನಾಡಿಗೆ ಅಪಮಾನವಾಗುತ್ತದೆ ಅಂತ ಏಕವಚನದಲ್ಲೇ ನಿಂದಿಸಿದ್ದಾರೆ. ಇನ್ನು ದಿನೇಶ್ ಗುಂಡೂರಾವ್ ಅವರ ಹೇಳಿಕೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಜವಾಬ್ದಾರಿಯುತ ಸ್ಥಾನದಲ್ಲಿರೋ ದಿನೇಶ್ ಗುಂಡೂರಾವ್ ಯೋಗಿ ಆದಿತ್ಯನಾಥ್ ಅವರಲ್ಲಿ ಬಹಿರಂಗ ಕ್ಷಮೆ ಯಾಚಿಸಬೇಕು ಅಂತ ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಅವರ ವಿರುದ್ಧ ಗುಂಡೂರಾವ್ ಅವರು ನೀಡಿರುವ ಹೇಳಿಕೆ ಆಕ್ಷೇಪಾರ್ಹ. ಕೂಡಲೇ ಅವರು ಯೋಗಿ ಅವರ ಬೇಷರತ್ ಕ್ಷಮೆ ಯಾಚಿಸಬೇಕು ಎಲ್ಲವಾದಲ್ಲಿ ರಾಜ್ಯಾದ್ಯಂತ ಗುಂಡೂರಾವ್ ಮತ್ತು ಕಾಂಗ್ರೆಸ್ ವಿರುದ್ಧ ತೀವ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ರಾಜ್ಯಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬರಲು ಬಿಡುವುದಿಲ್ಲ. ಅವರು ಹೋದಲ್ಲಿ ಬಂದಲ್ಲಿ ಎಲ್ಲೆಡೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ.

ಅಂತೆಯೇ ಗುಂಡೂರಾವ್ ಅವರನ್ನೂ ಕೂಡಲೇ ಬಂಧಿಸಬೇಕು ಎಂದು ಶೋಭಾ ಆಗ್ರಹಿಸಿದ್ದಾರೆ. ಇನ್ನು ಕೇಂದ್ರ ಸಚಿವ ಸದಾನಂದಗೌಡ ಸೇರಿದಂತೆ ಹಲವರು ದಿನೇಶ್ ವಿರುದ್ಧ ಟ್ವಿಟ್ಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಟ್ಟಾರೆ ಸದಾ ಸಂಯಮದಿಂದಲೇ ಮಾತನಾಡುತ್ತಿದ್ದ ದಿನೇಶ್ ಗುಂಡೂರಾವ್ ಈಗ ವಿವಾದಕ್ಕೆ ಆಹಾರವಾಗಿದ್ದಾರೆ. ಈ ವಿವಾದ ಇನ್ನು ಯಾವ ಹಂತಕ್ಕೆ ತಲುಪುತ್ತದೋ ಆ ದೇವರಿಗೇ ಗೊತ್ತು.

LEAVE A REPLY

Please enter your comment!
Please enter your name here