Home District ರಾಜ್ಯದ 156 ತಾಲೂಕುಗಳಲ್ಲಿ ತೀವ್ರ ಬರ..! ಕೈಕೊಟ್ಟ ಹಿಂಗಾರು, ಶೇ.49 ರಷ್ಟು ಪ್ರದೇಶದಲ್ಲಿ ಮಳೆ ಕೊರತೆ..!...

ರಾಜ್ಯದ 156 ತಾಲೂಕುಗಳಲ್ಲಿ ತೀವ್ರ ಬರ..! ಕೈಕೊಟ್ಟ ಹಿಂಗಾರು, ಶೇ.49 ರಷ್ಟು ಪ್ರದೇಶದಲ್ಲಿ ಮಳೆ ಕೊರತೆ..! ಉತ್ತರ ಒಳ ನಾಡಿನಲ್ಲಿ ಶೇ.66 ರಷ್ಟು ಮಳೆ ಕೊರತೆ..!

1759
0
SHARE

ರಾಜ್ಯದಾದ್ಯಂತ ಬರ ತೀವ್ರವಾಗಿ ವ್ಯಾಪಿಸುತ್ತಿದೆ. ಈ ಮೊದಲು 100 ತಾಲೂಕುಗಳಲ್ಲಿ ಕಾಣಿಸಿಕೊಂಡಿದ್ದ ಬರ, ಈಗ 156 ತಾಲೂಕುಗಳಿಗೆ ವ್ಯಾಪಿಸಿದೆ. ಬರ ಪರಿಹಾರ ಕಾಮಗಾರಿಗಳಿಗಾಗಿ ಸಕರ್ಾರ 100 ತಾಲೂಕುಗಳಿಗೆ ತಲಾ ಒಂದು ಕೋಟಿ ರೂ. ಹಾಗೂ ಹೆಚ್ಚುವರಿ 56 ತಾಲೂಕುಗಳಿಗೆ ತಲಾ 50 ಲಕ್ಷ ರೂ. ಮಂಜೂರು ಮಾಡಿದೆ.

ರಾಜ್ಯದಲ್ಲಿ ಬರದ ಛಾಯೆ ಆವರಿಸಿದೆ… ರಾಜ್ಯದಲ್ಲಿ ಉತ್ತಮ ಮುಂಗಾರು ಮಳೆಯಾಗಿದ್ದರೂ, ಕೆಲವು ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದ ಬರ ಪರಿಸ್ಥಿತಿ ತಲೆದೋರಿದೆ. ರಾಜ್ಯದಲ್ಲಿ ಹಿಂಗಾರು ಸಂಪೂರ್ಣವಾಗಿ ಕೈ ಕೊಟ್ಟಿದೆ. ಶೇ.49 ರಷ್ಟು ಪ್ರದೇಶದಲ್ಲಿ ಮಳೆ ಕೊರತೆ ಕಾಣಿಸಿಕೊಂಡಿದೆ. ಶೇಕಡಾ 90 ರಷ್ಟು ಬಿತ್ತನೆಯಾಗುವ ಉತ್ತರ ಒಳನಾಡಿನಲ್ಲೇ ಶೇ.66 ರಷ್ಟು ಮಳೆ ಕೊರತೆಯಾಗಿದೆ ಈ ಮೊದಲು ಘೋಷಿಸಲಾಗಿದ್ದ 100 ತಾಲೂಕುಗಳು ಸೇರಿದಂತೆ ಒಟ್ಟು 156 ತಾಲೂಕುಗಳಲ್ಲಿ ತೀವ್ರ ಬರ ಕಾಣಿಸಿಕೊಂಡಿದೆ.

ಸಚಿವ ಸಂಪುಟ ಉಪಸಮಿತಿ ಬರ ಪೀಡಿತ ತಾಲೂಕುಗಳ ಪಟ್ಟಿ ಪ್ರಕಟಿಸಿದೆ.ಬರ ಪರಿಹಾರ ಕಾಮಗಾರಿಗಳನ್ನು ಸರ್ಕಾರ ಈಗಾಗಲೇ ಆರಂಭಿಸಿದೆ. ಈ ಮೊದಲು ಬರ ಘೋಷಣೆಯಾಗಿದ್ದ 100 ತಾಲೂಕುಗಳಿಗೆ ತಲಾ ಒಂದು ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಈಗ ಹೆಚ್ಚುವರಿಯಾಗಿ ಬರ ಘೋಷಣೆಯಗಿರುವ 56 ತಾಲೂಕುಗಳಿಗೆ ತಲಾ 50 ಲಕ್ಷ ರೂ.ಗಳನ್ನು ಸರ್ಕಾರ ಬಿಡುಗಡೆ ಮಾಡಿದೆ.

ಬರ ಪರಿಹಾರ ಕಾಮಗಾರಿಗಳಿಗೆ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ 248 ಕೋಟಿ ರೂ.ಗಳಿವೆ. ಹಾಗಾಗಿ ಬರ ಪರಿಹಾರ ಕಾಮಗಾರಿಗಳಿಗೆ ಹಣಕಾಸಿನ ಕೊರತೆ ಇಲ್ಲ ಎಂದು ಕಂದಾಯ ಸಚಿವರು ಘೋಷಿಸಿದ್ದಾರೆ. ಕುಡಿಯುವ ನೀರು ಪೂರೈಕೆಗಾಗಿ ಪ್ರತಿ ತಾಲೂಕಿನಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕಪೋರ್ಸ ರಚಿಸಲಾಗಿದೆ. ಜಾನುವಾರುಗಳಿಗೆ ಮೇವೊದಗಿಸಲು ಹಾಗೂ ಗೋ ಶಾಲೆಗಳನ್ನು ತೆರೆಯಲು ಜಿಲ್ಲಾಧಿಕಾರಿಗಳಿಗೆ ಆದೇಶಿಸಲಾಗಿದೆ.

ಈಗಾಗಲೇ ರಾಜ್ಯ ಸರ್ಕಾರ 26 ಸಾವಿರ ರೈತರ ಖಾತೆಗಳಿಗೆ ನೇರವಾಗಿ 26.60 ಕೋಟಿ ರೂ. ಇನ್ ಪುಟ್ ಸಬ್ಸಿಡಿಯನ್ನು ಸಂದಾಯ ಮಾಡಿದೆ. ಆದರೆ, ಬೆಳೆ ನಷ್ಟ ಪರಿಹಾರ ನೀಡುವ ವಿಷಯದಲ್ಲಿ ಕೇಂದ್ರ ಸರ್ಕಾರ ಈಗ ಕ್ಯಾತೆ ತೆಗೆದಿದೆ. ಹಾಗಾಗಿ ಈ ಗೊಂದಲ ಪರಿಹರಿಸುವಂತೆ ಕೇಂದ್ರವನ್ನು ಒತ್ತಾಯಿಸಲು, ದೆಹಲಿಗೆ ತೆರಳುವುದಾಗಿ ಕಂದಾಯ ಸಚಿವ ಆರ್. ವಿ.ದೇಶಪಾಂಡೆ ತಿಳಿಸಿದ್ದಾರೆ…

LEAVE A REPLY

Please enter your comment!
Please enter your name here