Home District ರೇಬಿಸ್ ವೈರಾಣುವಿನಿಂದ ಮೃತ ಪಟ್ಟಿದ್ದವನ ಅಂತ್ಯಸಂಸ್ಕಾರಕ್ಕೆ ಹೋಗಿದ್ದ ಊರಿನ ಜನರಿಗೆ ಸೋಂಕಿನ ಆತಂಕ..!!!

ರೇಬಿಸ್ ವೈರಾಣುವಿನಿಂದ ಮೃತ ಪಟ್ಟಿದ್ದವನ ಅಂತ್ಯಸಂಸ್ಕಾರಕ್ಕೆ ಹೋಗಿದ್ದ ಊರಿನ ಜನರಿಗೆ ಸೋಂಕಿನ ಆತಂಕ..!!!

579
0
SHARE

ರೇಬೀಸ್ ವೈರಾಣುವಿನಿಂದ ಮೃತಪಟ್ಟ ಯುವಕನ ಅಂತ್ಯಸಂಸ್ಕಾರಕ್ಕೆ ಹೋಗಿ ಇಡೀ ಊರಿನ ಜನ ಆ್ಯಂಟಿ ರೇಬೀಸ್ ಚುಚ್ಚುಮದ್ದು ಪಡೆದುಕೊಳ್ಳಬೇಕಾದ ಸ್ಥಿತಿ ನಿರ್ಮಾಣಗೊಂಡಿರುವ ಘಟನೆ ದ.ಕ‌ ಜಿಲ್ಲೆಯ ಪುತ್ತೂರು ತಾಲೂಕಿನ ಇಚ್ಲಂಪಾಡಿ ಎಂಬಲ್ಲಿ ನಡೆದಿದೆ. ಆಶಿತ್ ಎನ್ನುವ ಯುವಕ ಆಗಸ್ಟ್ ಆಗಸ್ಟ್ 22ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ.

ಈತನ ಮೃತದೇಹವನ್ನು ಮನೆ ಮಂದಿಗೆ ನೀಡುವ ಸಂದರ್ಭದಲ್ಲಿ ಸಾವು ರೇಬಿಸ್ ವೈರಾಣುವಿನಿಂದ ಸಂಭವಿಸಿದೆ ಎನ್ನುವ ಕಾರಣ ನೀಡಲಾಗಿತ್ತು. ಅಲ್ಲದೆ ಮೃತದೇಹವನ್ನು ಯಾವುದೇ ಕಾರಣಕ್ಕೂ ತೆರೆಯಬಾರದು ಎನ್ನುವ ಸೂಚನೆಯನ್ನೂ ವೈದ್ಯರು ನೀಡಿದ್ದರು. ಆದರೆ ಮನೆ ಮಂದಿ ಅಂತಿಮ ವಿಧಿಗಳನ್ನು ಸಂಪ್ರದಾಯ ಪ್ರಕಾರ ನಿರ್ವಹಿಸಿದ್ದರು.

ಈ ಸಂದರ್ಭದಲ್ಲಿ ಪ್ಯಾಕ್ ಮಾಡಿದ್ದ ಮೃತದೇಹವನ್ನು ಬಿಚ್ಚಲಾಗಿದ್ದು, ಮೃತದೇಹದಿಂದ ರಕ್ತ ಮನೆಯ ಆವರಣದಲ್ಲಿ ಚೆಲ್ಲಿತ್ತು. ಮೃತ ಯುವಕನ ಸಂಬಂಧಿಕರು ಹಾಗೂ ಊರವರು ಅಂತಿಮ ವಿಧಿಯಲ್ಲಿ ಭಾಗಿಯಾಗಿದ್ದರು. ಸಾವು ರೇಬೀಸ್ ರೋಗದಿಂದ ಸಂಭವಿಸಿದೆ ಎನ್ನುವ ವಿಚಾರವೀಗ ಊರವರ ಗಮನಕ್ಕೆ ಬಂದ ಹಿನ್ನಲೆಯಲ್ಲಿ ಇದೀಗ ಊರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಇದೀಗ ಅಂತ್ಯಸಂಸ್ಕಾರದಲ್ಲಿ ಭಾಗಿಯಾದ 67 ಮಂದಿ ನೆಲ್ಯಾಡಿ ಸರಕಾರಿ ಆರೋಗ್ಯ ಕೇಂದ್ರದಲ್ಲಿ ಆ್ಯಂಟಿ ರೇಬೀಸ್ ಚುಚ್ಚುಮದ್ದನ್ನು ಪಡೆದಿದ್ದಾರೆ. ಇನ್ನು ಕೆಲವು ಮಂದಿ ಖಾಸಗಿ ಚಿಕಿತ್ಸಾಲಯದಲ್ಲೂ ಇಂಜೆಕ್ಷನ್ ಪಡೆದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಅಂತ್ಯಸಂಸ್ಕಾರದ ವೇಳೆ ಮೃತದೇಹದಿಂದ ರಕ್ತ ಹಾಗೂ ಎಂಜಲು ಚೆಲ್ಲಿದ್ದಲ್ಲಿ ಇದರಿಂದ ರೇಬೀಸ್ ವೈರಾಣು ಹರಡುವ ಸಾಧ್ಯತೆಯಿದೆ ಎನ್ನುವ ಅಭಿಪ್ರಾಯವನ್ನು ನೆಲ್ಯಾಡಿ ಸರಕಾರಿ ಆರೋಗ್ಯ ಕೇಂದ್ರದ ವೈದ್ಯರು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಊರಲ್ಲಿರುವ ಮಂದಿಯೆಲ್ಲ ಆತಂಕಗೊಂಡು ಆಸ್ಪತ್ರೆಯತ್ತ ಧಾವಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here