Home District ರೋಹಿಣಿ ಸಿಂಧೂರಿ ವಿರುದ್ಧ ಕೋಟಿ ಹಣ ದುರ್ಬಳಕೆ ಆರೋಪ..! ಮುಜರಾಯಿ ಆಯುಕ್ತರಾಗಿದ್ದ ವೇಳೆ ಮೈಸೂರು ಡಿಸಿ...

ರೋಹಿಣಿ ಸಿಂಧೂರಿ ವಿರುದ್ಧ ಕೋಟಿ ಹಣ ದುರ್ಬಳಕೆ ಆರೋಪ..! ಮುಜರಾಯಿ ಆಯುಕ್ತರಾಗಿದ್ದ ವೇಳೆ ಮೈಸೂರು ಡಿಸಿ ಭ್ರಷ್ಟಾಚಾರ..!? ದಾಖಲೆ ಬಿಡುಗಡೆ ಮಾಡಿದ ಜೆಡಿಎಸ್ ಶಾಸಕ ಸಾ.ರಾ.ಮಹೇಶ್

407
0
SHARE

ಮೈಸೂರು ಜಿಲ್ಲಾಧಿಕಾರಿ ವರ್ಗಾವಣೆ ವಿಚಾರ ವಿವಾದದ ಸ್ವರೂಪ ಪಡೆಯುವ ಎಲ್ಲ ಲಕ್ಷಣಗಳೂ ಗೋಚರಿಸುತ್ತಿವೆ. ಒಂದೆಡೆ ವರ್ಗಾವಣೆ ಪ್ರಶ್ನಿಸಿ ಬಿ.ಶರತ್ ಸಿಎಟಿ ಮೊರೆ ಹೋಗಿದ್ರೆ, ಮತ್ತೊಂದೆಡೆ ನೂತನ ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಅಧಿಕಾರ ದುರುಪಯೋಗದ ಆರೋಪಗಳು ಕೇಳಿಬಂದಿವೆ.ಇನ್ನೂ ರಾಜ್ಯ ಸರ್ಕಾರದ ವಿರುದ್ಧವೂ ಹರಿಹಾಯ್ದಿರುವ ಸಾ.ರಾ,ಮಹೇಶ್ ರೋಹಿಣಿ ಸಿಂಧೂರಿ ಅವರಿಗೆ ಅನುಕೂಲ ಮಾಡಿಕೊಡಲು ಮೈಸೂರಿಗೆ ವರ್ಗಾವಣೆ ಮಾಡಿದ್ದಾರೆಂದು ಆರೋಪ ಮಾಡಿದ್ದಾರೆ.

ಮೈಸೂರು ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಹುದ್ದೆಗಾಗಿ ಅಧಿಕಾರ ದುರುಪಯೋಗ ಮಾಡಿಕೊಂಡ ಆರೋಪಕ್ಕೆ ಗುರಿಯಾಗಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಜೆಡಿಎಸ್ ಶಾಸಕ ಸಾ.ರಾ.ಮಹೇಶ್, ರೋಹಿಣಿ ಸಿಂಧೂರಿ ವಿರುದ್ಧ ಬಹುಕೋಟಿ ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ದಾಖಲೆ ಬಿಡುಗಡೆ ಮಾಡಿದ ಮಾತನಾಡಿದ ಅವರು, ರೋಹಿಣಿ ಸಿಂಧೂರಿ ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾಗಿದ್ದಾಗ ಆಂಧ್ರಪ್ರದೇಶದ ತಿರುಮಲದಲ್ಲಿ ವಸತಿ ಗೃಹ, ಕಲ್ಯಾಣ ಮಂಟಪ, ಮೂಲಸೌಕರ್ಯ ಕಲ್ಪಿಸುವುದು ಸಂಬಂಧ ಪ್ರಸ್ತಾವನೆ ಸಲ್ಲಿಸಿದ್ದರು.

ಅದರ ಆಧಾರದ ಮೇಲೆ 2020ರ ಜೂನ್ 30ರಂದು ಸರ್ಕಾರ ಆದೇಶ ಮಾಡಿದೆ. 200 ಕೋಟಿ ರೂ. ಕಾಮಗಾರಿಯ ನಿರ್ಮಾಣ, ನಿರ್ವಹಣೆಯನ್ನು ಟಿಟಿಡಿಗೆ ವಹಿಸಿದೆ. ಆರ್ಕಿಟೆಕ್ಚರ್, ಲ್ಯಾಂಡ್ ಸ್ಕೇಪಿಂಗ್ ಮತ್ತು ಇಂಟೀರಿಯರ್ ವಿನ್ಯಾಸದ ಕೆಲಸವನ್ನು ಮೆ.ಗಾಯತ್ರಿ ಆಂಡ್ ನಮಿತ್ ಆರ್ಕಿಟೆಕ್ಟ್ಸ್ ಅವರಿಗೆ ನೀಡಲಾಗಿದೆ. ಇದಕ್ಕಾಗಿ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಕಾಯ್ದೆ 1999ರಡಿ ವಿನಾಯಿತಿ ಕೂಡ ನೀಡಲಾಗಿದೆ. ಅಂದ್ರೆ 10 ಕೋಟಿ ರೂ. ನೀಡಲಾಗಿದೆ ಎಂದು ದೂರಿದ್ದಾರೆ.

ತಿರುಪತಿಯಲ್ಲಿ ಮೂಲಸೌಕರ್ಯ ಕಲ್ಪಿಸುವುದಕ್ಕೆ ನಮ್ಮ ವಿರೋಧವಿಲ್ಲ. ಆದ್ರೆ ಜಾಗ ನಮ್ಮದು, ಹಣ ನಮ್ಮದು. ಆದ್ರೆ ಇಡೀ ಯೋಜನೆಯ ಕಾಮಗಾರಿ, ನಿರ್ಮಾಣ, ನಿರ್ವಹಣೆ ಎಲ್ಲವೂ ಟಿಟಿಡಿಗೆ ವಹಿಸಲಾಗಿದೆ. ಇದೆಲ್ಲದರ ಪ್ರಸ್ತಾವನೆ ಸಲ್ಲಿಸಿದವರು ರೋಹಿಣಿ ಸಿಂಧೂರಿ. ಆದ್ದರಿಂದಲೇ ಮೈಸೂರು ಜಿಲ್ಲಾಧಿಕಾರಿ ಹುದ್ದೆ ಅವರಿಗೆ ಸಿಕ್ಕ ಗಿಫ್ಟ್ ಅಂತ ಶಾಸಕ ಸಾ.ರಾ.ಮಹೇಶ್ ಗಂಭೀರ ಆರೋಪ ಮಾಡಿದ್ದಾರೆ.ಈ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಮೂಲಕ ಆಂಧ್ರಪ್ರದೇಶಕ್ಕೆ ಅನುಕೂಲ ಮಾಡಿಕೊಡಲಾಗಿದೆ. ಜಾಗ ನಮ್ಮದು, ಹಣ ನಮ್ಮದಾಗಿದ್ದು, ನಮ್ಮಲ್ಲೂ ವಿನ್ಯಾಸಕಾರರು ಇರಲಿಲ್ಲವಾ? ನಮ್ಮ ಲೋಕೋಪಯೋಗಿ ಇಲಾಖೆ ಇರಲಿಲ್ವಾ? ಎಂದು ಪ್ರಶ್ನಿಸಿದ ಅವರು ಸದರಿ ಕಾಮಗಾರಿಯನ್ನು ರಾಜ್ಯದ ಲೋಕೋಪಯೋಗಿ ಇಲಾಖೆಗೆ ವಹಿಸಬಹುದಿತ್ತು.

ಆದರೆ ಎಲ್ಲವನ್ನೂ ಟಿಟಿಡಿ ಮೇಲ್ವಿಚಾರಣೆ ಮೂಲಕ ಆಂಧ್ರಪ್ರದೇಶದ ಖಾಸಗಿ ಸಂಸ್ಥೆಗೆ ರೋಹಿಣಿ ಸಿಂಧೂರಿ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ದೂರಿದರು.ನಮ್ಮಲ್ಲಿ ಇಲಾಖೆ ಇಲ್ವ ನಿರ್ಮಾಣ ಮಾಡಲು ಎಂದು ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ದೂರಿದ್ದಾರೆ.ಅವರು ಸದರಿ ಕಾಮಗಾರಿಯನ್ನು ರಾಜ್ಯದ ಲೋಕೋಪಯೋಗಿ ಇಲಾಖೆಗೆ ವಹಿಸಬಹುದಿತ್ತು. ಆದರೆ ಎಲ್ಲವನ್ನೂ ಟಿಟಿಡಿ ಮೇಲ್ವಿಚಾರಣೆ ಮೂಲಕ ಆಂಧ್ರಪ್ರದೇಶದ ಖಾಸಗಿ ಸಂಸ್ಥೆಗೆ ರೋಹಿಣಿ ಸಿಂಧೂರಿ ಅನುಕೂಲ ಮಾಡಿಕೊಟ್ಟಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದರು.

ಇದೆಲ್ಲದರ ನಡುವೆ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಬಿ.ಶರತ್ ವರ್ಗಾವಣೆ ಪ್ರಶ್ನಿಸಿ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ ಮೆಟ್ಟಿಲು ಏರಿದ್ದು. ಒಂದು ವೇಳೆ ಸಿಎಟಿ ಆದೇಶಕ್ಕೆ ತಡೆ ನೀಡಿದ್ರೆ ರಾಜ್ಯ ಸರ್ಕಾರ ಮುಜುಗರಕ್ಕೆ ಒಳಗಾಗಬೇಕಾಗುತ್ತದೆ.

LEAVE A REPLY

Please enter your comment!
Please enter your name here