Home District ಸಿಎಂ ತವರಿನಲ್ಲಿ ಬಿಜೆಪಿ ಚಾಣಕ್ಯ ಅಮಿತ್ ಷಾ ಸಂಚಾರ..ಅರಮನೆಯಲ್ಲಿ ರಾಜವಂಶಸ್ಥರ ಭೇಟಿ ಮಾಡಿ ಮಾತುಕತೆ..

ಸಿಎಂ ತವರಿನಲ್ಲಿ ಬಿಜೆಪಿ ಚಾಣಕ್ಯ ಅಮಿತ್ ಷಾ ಸಂಚಾರ..ಅರಮನೆಯಲ್ಲಿ ರಾಜವಂಶಸ್ಥರ ಭೇಟಿ ಮಾಡಿ ಮಾತುಕತೆ..

188
0
SHARE

ಮುಖ್ಯಮಂತ್ರಿಗಳ ತವರಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಬಿಡುವಿಲ್ಲದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು..ಬೆಳಿಗ್ಗೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.ಬಳಿಕ ಮೈಸೂರು ಅರಮನೆಗೆ ತೆರಳಿ ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಮತ್ತು ಮಹಾರಾಜಾ ಯದುವೀರ್ ಒಡೆಯರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.. ಈ ವೇಳೆ ಯದುವೀರ್ ಗೆ ಬಿಜೆಪಿ ಸೇರಲು ಆಹ್ವಾನ ನೀಡಿದ ಅಮಿತ್ ಶಾ, ಮುಂಬರುವ ಚುನಾವಣೆಯಲ್ಲಿ ಕಮಲ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.

ಅಲ್ಲಿಂದ ನೇರವಾಗಿ ಹತ್ಯೆಯಾಗಿರುವ ಆರ್ ಎಸ್ ಎಸ್ ಕಾರ್ಯಕರ್ತ ರಾಜು ಅವರ ಮನೆಗೆ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳಿದರು.ಬಳಿಕ ಮೈಸೂರು ಮಹಾರಾಜಾ ಕಾಲೇಜು ಮೈದಾನದಲ್ಲಿ ಏರ್ಪಡಿಸಲಾಗಿದ್ದ ನವಶಕ್ತಿ ಸಮಾವೇಶದಲ್ಲಿ ಪಾಲ್ಗೊಂಡು ಭಾಷಣ ಮಾಡಿದರು..ಈ ವೇಳೆ ಮೈಸೂರು ಮಾಜಿ ಮೇಯರ್ ಸಂದೇಶ್ ಸ್ವಾಮಿಯವರನ್ನು ಪಕ್ಷಕ್ಕೆ ಬರಮಾಡಿಕೊಂಡರು..ಈ ವೇಳೆ ಮಾತನಾಡಿದ ಅವರು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.. ಮೈಸೂರಿನಲ್ಲಿ ಬಿಜೆಪಿ ವೀಕ್ ಆಗಿದೆ ಅಂದುಕೊಂಡಿದ್ದೆ. ಆದರೆ ಹಾಗಿಲ್ಲ.. ಕಾಂಗ್ರೆಸ್ ಮತ್ತು ಸಿಎಂಗೆ ಮೈಸೂರಿನಲ್ಲೇ ಶಾಕ್ ಆಗುತ್ತೆ ನೋಡ್ತಾ ಇರಿ ಎಂದು ಟಾಂಗ್ ಕೊಟ್ಟರು.. ಚಿತ್ರದುರ್ಗದಲ್ಲಿ ಬಾಯ್ತಪ್ಪಿ ಮಾತನಾಡಿದಾಗ ತಮ್ಮ ವಿರುದ್ಧ ಟೀಕಾ ಪ್ರಹಾರ ನಡೆಸಿದರು.. ಆದ್ರೆ ಜನ ಚುನಾವಣೆ ವೇಳೆ ನಿರ್ಣಯ ಮಾಡುವಾಗ ತಪ್ಪು ಮಾಡಲ್ಲ ಎಂದು ತಿರುಗೇಟು ನೀಡಿದರು.

ಸಮಾವೇಶದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಸಿದ್ದರಾಮಯ್ಯ ಅಕ್ರಮ-ಅಧರ್ಮಗಳ ರಾಯಭಾರಿ ಎಂದು ಜರಿದರು.. ಸಿದ್ದರಾಮಯ್ಯ ಮತ್ತು ಅವರ ಪುತ್ರ ಯತೀಂದ್ರರನ್ನು ಸೋಲಿಸುವ ಸಂಕಲ್ಪ ಮಾಡಿ ಎಂದು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು..ಬಿಜೆಪಿ 150 ಸ್ಥಾನ ಗೆಲ್ಲುವ ಗುರಿ ತಲುಪಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ದಲಿತ ನಾಯಕರೊಂದಿಗಿನ ಸಂವಾದದ ಬಳಿಕ,ಕೊಳ್ಳೇಗಾಲಕ್ಕೆ ಭೇಟಿ ನೀಡಿ ಷಾ, ನಂಜನಗೂಡು ಶ್ರೀಕಂಠೇಶ್ವರ ದೇವಾಲಯ ಮತ್ತು ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮಕ್ಕೂ ತೆರಳುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು..ನಾಳೆ ಮತ್ತೆ ಮೈಸೂರು,ಮೇಲುಕೋಟೆ, ಚನ್ನಪಟ್ಟಣ ಸೇರಿದಂತೆ ವಿವಿಧೆಡೆ ಪ್ರವಾಸ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here