Home District “ಸಿದ್ದರಾಮಯ್ಯ ಸರ್ಕಾರದಲ್ಲಿ ದೊಡ್ಡ ತಪ್ಪು ಮಾಡಿದ್ದೇವೆ”..!! ಸಭೆಯಲ್ಲಿ ತಪ್ಪೊಪ್ಪಿಕೊಂಡ ಡಿ.ಕೆ.ಶಿವಕುಮಾರ್..?!

“ಸಿದ್ದರಾಮಯ್ಯ ಸರ್ಕಾರದಲ್ಲಿ ದೊಡ್ಡ ತಪ್ಪು ಮಾಡಿದ್ದೇವೆ”..!! ಸಭೆಯಲ್ಲಿ ತಪ್ಪೊಪ್ಪಿಕೊಂಡ ಡಿ.ಕೆ.ಶಿವಕುಮಾರ್..?!

1523
0
SHARE

ಪ್ರತ್ಯೇಕ ಲಿಂಗಾಯತ ಧರ್ಮ ವಿಭಜನೆ ಕುರಿತು ಸಚಿವ ಡಿ.ಕೆ.ಶಿವಕುಮಾರ್ ತಪ್ಪೊಪ್ಪಿಕೊಂಡಿದ್ದಾರೆ. ಸಿದ್ದರಾಮಯ್ಯ ಸರ್ಕಾರದಲ್ಲಿ ದೊಡ್ಡ ತಪ್ಪು ಮಾಡಿದ್ದೇವೆ. ರಾಜಕೀಯದವರು ಧರ್ಮದ ವಿಚಾರದಲ್ಲಿ ಜಾತಿಯ ವಿಚಾರದಲ್ಲಿ ಯಾವ ಸರ್ಕಾರವೂ ಕೈ ಹಾಕಬಾರದು.

ಸಿದ್ದರಾಮಯ್ಯನ ಸರ್ಕಾರದ ಅವಧಿಯಲ್ಲಿ ದೊಡ್ಡ ಅಪರಾಧವಾಗಿದೆ.ಆಗ ನಾನು ಸಚಿವನಾಗಿದ್ದೆ. ಸರ್ಕಾರದ ತೀರ್ಮಾನ ಆ ಸಂದರ್ಭದಲ್ಲಿ ಬೇಕಾದಷ್ಟು ಅಲ್ಲೋಲ ಕಲ್ಲೋಲ ಮಾಡಿದೆ ಎಂದಿದ್ದಾರೆ.ನಾನೂ ಸಹ ಆ ಸರ್ಕಾರದಲ್ಲಿ ಮಂತ್ರಿಯಾಗಿದ್ದೆ.

ನಮ್ಮ ಬೇರೆ ಸಚಿವರು ವಿಭಿನ್ನವಾಗಿ ಮಾತಾಡಿದರು.ಆದ್ರೆ ಸರ್ಕಾರದ ತೀರ್ಮಾನ ಆ ಸಂದರ್ಭದಲ್ಲಿ ಬೇಕಾದಷ್ಟು ಅಲ್ಲೋಲ ಕಲ್ಲೋಲ.ರಾಜಕೀಯದಲ್ಲಿ ಅನೇಕ ವಿಭಿನ್ನವಾದ ಹೇಳಿಕೆಗಳನ್ನು ನಾವು ನೋಡಿದ್ದೇವೆ.ಯಾವುದೇ ಸರ್ಕಾರ ಧರ್ಮದಲ್ಲಿ ಕೈ ಹಾಕಬಾರದು ಎನ್ನೋದಕ್ಕೆ ಮೊನ್ನೆ ನಡೆದ ಜನಾಭಿಪ್ರಾಯವೇ ಸಾಕ್ಷಿ.

ದಯವಿಟ್ಟು ನಾವು, ಸರ್ಕಾರ ತಪ್ಪು ಮಾಡಿದ್ರೆ ನಿಮ್ಮ ಕ್ಷಮಾಪಣೆ ಇರಲಿ.ಹೃದಯತುಂಬಿ ನಮ್ಮನ್ನು ಕ್ಷಮಿಸಿ ಎಂದ ಸಚಿವ ಡಿ ಕೆ ಶಿವಕುಮಾರ್.ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ‌ ಕ್ಷಮೆಯಾಚಿಸಿದ ಸಚಿವ ಡಿಕೆಶಿ.

ಪಟ್ಟಣದಲ್ಲಿ ರಂಭಾಪುರಿ ಶ್ರೀಗಳ ಧರ್ಮಸಮ್ಮೇಳನ ಕಾರ್ಯಕ್ರಮದಲ್ಲಿ ಕ್ಷಮೆಯಾಚನೆ.ಧರ್ಮದಲ್ಲಿ ರಾಜಕಾರಣ ಮಾಡಬಾರದು. ರಾಜಕೀಯದ ಮೂಲಕ ಧರ್ಮ ಉಳಿಸಬೇಕು.ಧರ್ಮವನ್ನು ಹಾಳು ಮಾಡೋ ಕೆಲಸಕ್ಕೆ ಹೋಗಬಾರದು.

LEAVE A REPLY

Please enter your comment!
Please enter your name here