Home District ಸೆಪ್ಟಂಬರ್ 21 ಶಾಲಾ-ಕಾಲೇಜುಗಳು ಆರಂಭ! ಸೆಪ್ಟೆಂಬರ್‌ 21 ರಿಂದ ಶಾಲೆ ತೆರೆದರೂ ತರಗತಿ ನಡೆಯಲ್ಲ..

ಸೆಪ್ಟಂಬರ್ 21 ಶಾಲಾ-ಕಾಲೇಜುಗಳು ಆರಂಭ! ಸೆಪ್ಟೆಂಬರ್‌ 21 ರಿಂದ ಶಾಲೆ ತೆರೆದರೂ ತರಗತಿ ನಡೆಯಲ್ಲ..

3
0
SHARE

ಸೆಪ್ಟಂಬರ್ 21 ರಿಂದ ಶಾಲೆಗಳು ತೆರೆಯುತ್ತೇವೆ ಆದರೆ ತರಗತಿಗಳು ಪ್ರಾರಂಭವಾಗುವುದಿಲ್ಲ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ. ಕೇಂದ್ರ ಸರ್ಕಾರದಿಂದ ಗ್ರೀನ್‌ ಸಿಗ್ನಲ್‌ ಸಿಗುವವರೆಗೂ ತರಗತಿಗಳು ನಡೆಯುವುದಿಲ್ಲ ಎಂದು ಅವರು ಹೇಳಿದ್ದಾರೆ. ಅಲ್ಲದೇ ಖಾಸಗಿ ಶಾಲೆಗಳು ಕೇವಲ ಒಂದು ಅವಧಿಯ ಶುಲ್ಕವನ್ನು ಮಾತ್ರ ಪೋಷಕರಿಂದ ಪಡೆಯಬೇಕು ಎಂದು ಸುರೇಶ್ ಕುಮಾರ್ ಎಚ್ಚರಿಸಿದ್ದಾರೆ.

ಕಿಲ್ಲರ್ ಕೊರೋನಾ ಅಟ್ಟಹಾಸದಿಂದ ಶೈಕ್ಷಣಿಕ ವರ್ಷ ಇನ್ನೂ ಆರಂಭವಾಗಿಲ್ಲ… ಶಾಲಾ-ಕಾಲೇಜುಗಳು ಬಾಗಿಲು ತೆರೆದಿಲ್ಲ.. ಖಾಸಗಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಮಾತ್ರ ಆನ್ ಲೈನ್ ನಲ್ಲಿ ಪಾಠ ಮಾಡಲಾಗುತ್ತಿದೆ.. ಆದ್ರೆ ಬಹುತೇಕ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಆನ್ ಲೈನ್ ಪಾಠವೂ ಇಲ್ಲ.. ಕೊರೋನಾ ಅಬ್ಬರ ಹೀಗೆ ಮುಂದುರೆದ್ರೆ ಮಕ್ಕಳ ವಿದ್ಯಾಭ್ಯಾಸ ಹೇಗೆ ಎಂದು ಪೋಷಕರು ತಲೆಕೆಡಿಸಿಕೊಂಡಿದ್ದಾರೆ.. ಮತ್ತೊಂದೆಡೆ ಕೊರೋನಾ ಆತಂಕದ ನಡುವೆಯೂ ಶಾಲೆಗಳನ್ನು ತೆರೆಯುವುದು ಹೇಗೆ ಎಂದು ಸರ್ಕಾರಗಳು ಚಿಂತನೆ ನಡೆಸುತ್ತಿವೆ.

ಇನ್ನೂ ಸೆಪ್ಟಂಬರ್ 21ರಿಂದ ಶಾಲಾ-ಕಾಲೇಜುಗಳು ಆರಂಭವಾಗಲಿದೆ ಎಂದು ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆಯಾದ ಬಳಿಕ ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಮತ್ತಷ್ಟು ಗೊಂದಲ ಏರ್ಪಟ್ಟಿದೆ… ಕೊರೋನಾ ನಡುವೆ ಮಕ್ಕಳನ್ನು ಹೇಗೆ ಕಳುಹಿಸುವುದ ಎಂದು ಪೋಷಕರು ಚಿಂತೆಗೊಳಗಾಗಿದ್ದಾರೆ.. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದು, ಸೆಪ್ಟೆಂಬರ್‌ 21 ರಿಂದ ಶಾಲೆ ತೆರೆದರೂ ತರಗತಿ ನಡೆಯಲ್ಲ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರದಿಂದ ಗ್ರೀನ್‌ ಸಿಗ್ನಲ್‌ ಸಿಗುವವರೆಗೂ ತರಗತಿಗಳು ನಡೆಯುವುದಿಲ್ಲ. ಆದ್ದರಿಂದ ಸೆ.30ರೊಳಗೆ 1ರಿಂದ 10ನೇ ತರಗತಿ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಮುಗಿಯಬೇಕಿದೆ ಎಂದರು.

ಖಾಸಗಿ ಶಾಲೆಗಳು ಕೇವಲ ಒಂದು ಅವಧಿಯ ಶುಲ್ಕವನ್ನು ಮಾತ್ರ ಪೋಷಕರಿಂದ ಪಡೆಯಬೇಕು. ಯಾವುದೇ ಸಮಸ್ಯೆಯಾದರೆ ಡಿಡಿಪಿಐ, ಬಿಇಓ ಈ ಬಗ್ಗೆ ಕ್ರಮಕೈಗೊಳ್ಳಲಿದ್ದಾರೆ ಎಂದು ಸುರೇಶ್ ಕುಮಾರ್ ಹೇಳಿದರು. ಈ ವಿಚಾರವಾಗಿ ಖಾಸಗಿ ಶಾಲೆಗಳಿಗೆ ಸರಕಾರದಿಂದ ಸೂಚನೆ ಕೊಟ್ಟಿದ್ದೇವೆ ಎಂದ ಸುರೇಶ್ ಕುಮಾರ್, ಪೋಷಕರಿಗೆ ಇದರಿಂದ ಸಮಸ್ಯೆಯಾದರೆ ಕೂಡಲೇ ಬಿಇಓ ಅವರನ್ನು ಸಂಪರ್ಕಿಸಿ ಸಮಸ್ಯೆ ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಹೇಳಿದ್ದಾರೆ.

ಇದೇ ವೇಳೆ, ರಾಜ್ಯದಲ್ಲಿ ಸಕಾರಾತ್ಮಕ ಬೆಳವಣಿಗೆ ಆಗುತ್ತಿದೆ ಎಂದು ಸುರೇಶ್​ ಕುಮಾರ್ ಸಂತಸ ವ್ಯಕ್ತಪಡಿಸಿದರು. ಪೋಷಕರು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಾತಿ ಮಾಡುತ್ತಿದ್ದಾರೆ. ಎಷ್ಟೇ ಮಕ್ಕಳು ಬಂದರೂ ಅವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುತ್ತೇವೆ. ಖಾಸಗಿ ಶಾಲೆಯಿಂದ ಟಿಸಿ ಕೊಡದಿದ್ದರೆ, ಬಿಇಓಯಿಂದ ಕೊಡಿಸುವ ವ್ಯವಸ್ಥೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

LEAVE A REPLY

Please enter your comment!
Please enter your name here