Home District “ಹಾಸನ ಲೋಕಸಭಾ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಕಣಕ್ಕೆ”..!! JDS ವರಿಷ್ಠ H.D.ದೇವೇಗೌಡ ಪ್ರಕಟ..”ಸಾರ್ವತ್ರಿಕ ಚುನಾವಣೆ ಬಳಿಕವೂ...

“ಹಾಸನ ಲೋಕಸಭಾ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಕಣಕ್ಕೆ”..!! JDS ವರಿಷ್ಠ H.D.ದೇವೇಗೌಡ ಪ್ರಕಟ..”ಸಾರ್ವತ್ರಿಕ ಚುನಾವಣೆ ಬಳಿಕವೂ ಮೈತ್ರಿ ಸರ್ಕಾರ ಬೀಳಲ್ಲ”…

2955
0
SHARE

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣನನ್ನು ಹಾಸನ ಲೋಕಸಭಾ ಅಭ್ಯರ್ಥಿಯಾಗಿ ಕಣಕ್ಕಿಳಿಸುತ್ತೇವೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ. ನಾನೇ ನಾಲ್ಕೈದು ದಿನ ಹಾಸನದಲ್ಲಿದ್ದು ಕಾರ್ಯಕರ್ತರ ಸಭೆ ನಡೆಸಿ ಮಾತನಾಡುತ್ತೇನೆ ಎಂದು ಹೇಳಿದ್ದಾರೆ. ಇನ್ನೂ ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬಿಎಸ್ ಯಡಿಯೂರಪ್ಪಗೆ ತಿರುಗೇಟು ನೀಡಿದ್ದಾರೆ..

ಬಿಜೆಪಿಯವರಿಗೆ ಕುಮಾರಸ್ವಾಮಿಯೇ ಟಾರ್ಗೆಟ್ ಲೋಕಸಭಾ ಚುನಾವಣೆಗೂ ಮುನ್ನ ಕುಮಾರಸ್ವಾಮಿಯನ್ನ ಅಧಿಕಾರದಿಂದ ಕೆಳಗಿಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನೂ ನಾನು ಪ್ರಧಾನಿ ಅಭ್ಯರ್ಥಿಯಾಗಲ್ಲ, ಲೋಕಸಭಾ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ಪುನರುಚ್ಚರಿಸಿದ್ದಾರೆ…

ಇನ್ನೂ ಮುಂದಿನ ದಿನಗಳಲ್ಲಿ ಹೆಚ್.ಡಿ.ಕುಮಾರಸ್ವಾಮಿ ರಾಷ್ಚ್ರ ರಾಜಕಾರಣಕ್ಕೆ ಹೋಗುವ ಸಾಧ್ಯತೆ ಇದೆ ಎಂದೂ ಹೇಳಿದ್ದಾರೆ.ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಟೆಂಪಲ್ ರನ್ ಮುಂದುವರಿದಿದೆ. ಇಂದು ಬೆಳಗ್ಗೆ ಹಾಸನ ಜಿಲ್ಲೆಯ ಹೊಳೇನರಸೀಪುರ ತಾಲೂಕಿನ ಹರದನಹಳ್ಳಿ ಗ್ರಾಮದ ಕುಲದೇವರು ಈಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ…

ಇದೆ ವೇಳೆ ಮಾಜಿ ಪ್ರಧಾನಿ ದೇವೇಗೌಡರು, ಸಚಿವ ಹಾಗು ಸಹೋದರ ಹೆಚ್.ಡಿ.ರೇವಣ್ಣ ಸೇರಿದಂತೆ ಕುಟುಂಬ ಸದಸ್ಯರೂ ಭಾಗಿಯಾಗಿದ್ರು.ಮಧ್ಯಾಹ್ನದವರೆಗೆ ಪೂಜಾಕಾರ್ಯದಲ್ಲಿ ಭಾಗಿಯಾಗುವ ಸಿಎಂ ಮಧ್ಯಾಹ್ನ ನಂತರ ಧರ್ಮಸ್ಥಳಕ್ಕೆ ತೆರಳಲಿದ್ದಾರೆ…

ಅಲ್ಲಿ ಮಂಜುನಾಥನ ದರ್ಶನ ಪಡೆದು ಅಲ್ಲಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿದ್ದಾರೆ, ಇಂದು ರಾತ್ರಿ ಕುಕ್ಕೆ ಸುಬ್ರಹ್ಮಣ್ಯದಲ್ಲೇ ವಾಸ್ತವ್ಯ ಹೂಡಿ ನಾಳೆ ಸುಬ್ರಹ್ಮಣ್ಯನ ದರ್ಶನ ಪಡೆದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ…

LEAVE A REPLY

Please enter your comment!
Please enter your name here