1222 ಅಗ್ನಿಶಾಮಕ ದಳದ ಅಭ್ಯರ್ಥಿ ಗಳಿಗೆ ಶೀಘ್ರವೇ ನೇಮಕಾತಿ ಪತ್ರ -ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು

ಶೀಘ್ರವೇ 1222 ಅಗ್ನಿಶಾಮಕ ದಳದ ಅಭ್ಯರ್ಥಿಗಳಿಗಾಗಿ ನೇಮಕಾತಿ ವಿತರಿಸಲು, ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ನಿರ್ದೇಶನ ನೀಡಿದ್ದಾರೆ. ಈ ಸಂಬಂಧ ಸದಾಶಿವ ನಗರದಲ್ಲಿ ಮಾತನಾಡಿದ ಸಚಿವರು, ರಾಜ್ಯ ಸರಕಾರವು, ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಅಗ್ನಿಶಾಮಕ ಠಾಣೆ ಗಳನ್ನು ಆದ್ಯತೆ ಮೇರೆಗೆ ಸ್ಥಾಪಿಸಿದ್ದು, ಇದಕ್ಕೆ ಸಂಬಂಧಿಸಿದಂತೆ, ಹುದ್ದೆಗಳ ಭರ್ತಿಗೆ ಸಹ ಕ್ರಮ ಕೈಗೊಂಡಿದೆ. ಇಲಾಖೆಯಲ್ಲಿ ಒಟ್ಟು 7057 ವಿವಿಧ ಶ್ರೇಣಿಯ ಹುದ್ದೆಗಳಿದ್ದು, 2021ನೇ ವರ್ಷದ ಅಂತ್ಯಕ್ಕೆ, ಸುಮಾರು 2627 ಹುದ್ದೆ ಗಳು ಖಾಲಿಯಿದ್ದು, ಪ್ರಸ್ತುತ ವರ್ಷ 1567 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದರು. ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಅಗ್ನಿಶಾಮಕ ಠಾಣೆ ಗಳ ಸ್ಥಾಪನೆಗೆ, ಸರಕಾರ ವಿಶೇಷ ಕ್ರಮ ಕೈಗೊಂಡು, ನೂತನ ಕಟ್ಟಡಗಳೂ ಹಾಗೂ ಇನ್ನಿತರ ಸೌಲಭ್ಯ ಗಳನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದುವರೆಗೆ ಒಟ್ಟು 607 ಅಭ್ಯರ್ಥಿಗಳು ನೇಮಕಾತಿ ಆದೇಶ ಪಡೆದಿದ್ದಾರೆ. ಇನ್ನುಳಿದ ಅಭ್ಯರ್ಥಿಗಳ ಆಯ್ಕೆ ಸಿಂಧುತ್ವ ವನ್ನೂ ಪಡೆದಿದ್ದು, ನೇಮಕಾತಿ ಆದೇಶ ನೀಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

 

Leave a Reply

Your email address will not be published.