ದೇಶದಲ್ಲಿ ಒಂದೇ ದಿನ 15,102 ಸೋಂಕಿತರು ಪತ್ತೆ..! 278 ಮಂದಿ ಕೊರೋನಾಗೆ ಬಲಿ

ರಾಷ್ಟ್ರೀಯ

ನವದೆಹಲಿ: ಕಳೆದ 24 ಗಂಟೆಗಳಲ್ಲಿ 15,102 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಕಳೆದೊಂದು ದಿನದಲ್ಲಿ ದೇಶದಲ್ಲಿ ಮಹಾಮಾರಿ ಸೋಂಕಿಗೆ 278 ಮಂದಿ ಸಾವನ್ನಪ್ಪಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 5,12,622ಕ್ಕೆ ಏರಿಕೆಯಾಗಿದೆ. ಸದ್ಯಕ್ಕೆ 1,64,522 ಸಕ್ರಿಯ ಪ್ರಕರಣಗಳಿವೆ. ನಿನ್ನೆ 31,377 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಈ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 4,21,89,887ಕ್ಕೆ ಏರಿಕೆಯಾಗಿದೆ. ದೈನಂದಿನ ಪಾಸಿಟಿವಿಟಿ ದರ 0.38% ಇದೆ.

Leave a Reply

Your email address will not be published.