ದೇಶದಲ್ಲಿ ಒಂದೇ ದಿನ 16,906 ಮಂದಿಗೆ ಕೊರೋನಾ ಸೋಂಕು..! ಸಾವಿನ ಸಂಖ್ಯೆ ಎಷ್ಟು ಗೊತ್ತಾ..?

ಬೆಂಗಳೂರು

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 16,906 ಹೊಸ ಕೋವಿಡ್‌ ಕೇಸ್​​​ಗಳು ದೃಢಪಟ್ಟಿವೆ. 45 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು ಸಾವಿನ ಸಂಖ್ಯೆ 5,25,428ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಸದ್ಯಕ್ಕೆ ದೇಶದಲ್ಲಿ 1,32,457 ಸಕ್ರಿಯ ಪ್ರಕರಣಗಳಿವೆ. 24 ಗಂಟೆಗಳ ಅವಧಿಯಲ್ಲಿ1,414 ಸಕ್ರಿಯ ಕೋವಿಡ್​ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ. ನಿನ್ನೆ ದೇಶಾದ್ಯಂತ 15,447 ಮಂದಿ ಚೇತರಿಸಿಕೊಂಡು ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4,30,11,874 ಕ್ಕೆ ಏರಿದೆ. ಸಾವಿನ ಪ್ರಮಾಣ ಶೇ. 1.20 ರಷ್ಟಿದ್ದರೆ, ಚೇತರಿಕೆ ದರ ಶೇ. 98.49 ರಷ್ಟಿದೆ.

ದೈನಂದಿನ ಪಾಸಿಟಿವಿಟಿ ದರ ಶೇ. 3.68 ಮತ್ತು ಸಾಪ್ತಾಹಿಕ ಪಾಸಿಟಿವಿಟಿ ದರ ಶೇ. 4.26 ರಷ್ಟಿದೆ. ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ಈವರೆಗೆ 199.12 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ. ಮತ್ತು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಪ್ರಕಾರ, ಜುಲೈ 12 ರವರೆಗೆ 86,77,69,574 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ ಮಂಗಳವಾರ 4,59,302 ಜನರಿಗೆ ಕೊರೊನಾ ಟೆಸ್ಟ್​ ಮಾಡಲಾಗಿದೆ.

 

Leave a Reply

Your email address will not be published.