1947ರ ಹಿಂದಿನ ಕಾಂಗ್ರೆಸ್ ಬೇರೆ, ಈಗಿನ ಸೋಗಲಾಡಿ ಸಿದ್ಧಹಸ್ತರು ಇರುವ ಕಾಂಗ್ರೆಸ್ಸೇ ಬೇರೆ: ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು

ಬೆಂಗಳೂರು: ಕಾಂಗ್ರೆಸ್ ಸ್ವಾತಂತ್ರ್ಯ ಹೋರಾಟ ಮಾಡಿದ್ದೆ ಜೆಡಿಎಸ್ ನವರನ್ನು ಮುಖ್ಯಮಂತ್ರಿ ಮಾಡುವುದಕ್ಕೆ ಎಂಬ ಡಿ.ಕೆ.ಶಿವ ಕುಮಾರ್ ಹೇಳಿಕೆಗೆ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದರು. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು, ಈಗ ಸ್ವಾತಂತ್ರೋತ್ಸವದ ನಡಿಗೆ ಎಂದು ಹೊರಟಿದ್ದೀರಿ. ಯಾರ ಸ್ವಾತಂತ್ರ್ಯಕ್ಕಾಗಿ ಎಂದು ಸ್ವಲ್ಪ ಬಿಡಿಸಿ ಹೇಳುವಿರಾ? ಇದುವರೆಗೂ ಕಾಂಗ್ರೆಸ್ ನಡೆಸಿದ ಸ್ವಾತಂತ್ರ್ಯ ವಿರೋಧಿ ಕೃತ್ಯಗಳಿಗೆ ಉತ್ತರ ಕೊಡುವಿರಾ ಎಂದು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಹೋರಾಟ ಮಾಡಿದ್ದೇ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಹೇಳಿಕೆ ಅಪ್ರಭುದ್ಧತೆಯ ಪ್ರತೀಕ ಮತ್ತು ಪರಮ ಬಾಲಿಶ ಎಂದು ಟೀಕಿಸಿದ್ದಾರೆ.

ಅವರಿಗೆ ಗೊತ್ತಿರಲಿ, 1947ರ ಹಿಂದಿನ ಕಾಂಗ್ರೆಸ್ ಬೇರೆ, ಈಗಿನ ಸೋಗಲಾಡಿ ಸಿದ್ಧಹಸ್ತರು ಇರುವ ಕಾಂಗ್ರೆಸ್ಸೇ ಬೇರೆ. ಸಮಸ್ತ ಭಾರತೀಯರಿಗೆ ಸ್ವಾತಂತ್ರ್ಯ ತಂದುಕೊಡಲು ಮಹಾತ್ಮಗಾಂಧಿ ನೇತೃತ್ವದ ಕಾಂಗ್ರೆಸ್ ಹೋರಾಟ ಮಾಡಿತ್ತು. ನಂತರದ ಕಾಂಗ್ರೆಸ್ ಮಾಡಿದ್ದೇ ಸ್ವಾತಂತ್ರ್ಯದ ಮಾರಣಹೋಮ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಂವಿಧಾನ ಕೊಟ್ಟವರು, ದೇಶದ ಮೊದಲನೇ ಸಂಪುಟದಲ್ಲಿ ಸಚಿವರಾಗಿದ್ದವರು ಡಾ.ಬಿ.ಆರ್.ಅಂಬೇಡ್ಕರ್ ಅವರು. ಅಂಥ ಮಹನೀಯರನ್ನು ಸಂಸತ್ತಿಗೇ ಮತ್ತೆ ಬಾರದಂತೆ ತಡೆದು, ಭಾರತದ ದೀನದಲಿತರ ದನಿಯನ್ನು ನಿರ್ದಯವಾಗಿ ಅಡಗಿಸಿದ ಪಕ್ಷದ ನಾಯಕರು ಇವತ್ತು ಸ್ವಾತಂತ್ಯದ ಭಜನೆ ಮಾಡುತ್ತಿದ್ದಾರೆ ಎಂದು ಟೀಕೆ ಮಾಡಿದ್ದಾರೆ.

Leave a Reply

Your email address will not be published.