Home Elections 2018 24ನೇ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ B.S.ಯಡಿಯೂರಪ್ಪರ ಅವಿಸ್ಮರಣೀಯ ಕ್ಷಣ…

24ನೇ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ B.S.ಯಡಿಯೂರಪ್ಪರ ಅವಿಸ್ಮರಣೀಯ ಕ್ಷಣ…

249
0
SHARE

ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ವಿರೋಧದ ನಡುವೆಯೂ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬೆಂಗಳೂರಿನ ರಾಜಭವನದ ಆವರಣದಲ್ಲಿರುವ ಗಾಜಿನ ಮನೆಯಲ್ಲಿ ಬಿಎಸ್‌ವೈ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ರಾಜ್ಯಪಾಲ ವಜುಭಾಯಿ ವಾಲಾ ಅವರು ಬಿಎಸ್ ವೈಗೆ ಪ್ರತಿಜ್ಞಾ ವಿಧಿ ಬೋಧಿಸಿದರು…
ನೂತನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ರೈತರು ಮತ್ತು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಆ ಮೂಲಕ ಬಿಎಸ್ ವೈ ಮೂರನೇ ಬಾರಿಗೆ ಮತ್ತು ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಬಿಎಸ್‌ವೈ ಪದಗ್ರಹಣ ಮಾಡಿದ್ದಾರೆ. ಈ ವೇಳೆ ರಾಜಭವನದ ಆವರಣದಲ್ಲಿ ಮತ್ತು ರಾಜನಭವನದ ಹೊರಗೆ ನೆರೆದಿದ್ದ ಸಾವಿರಾರು ಬಿಜೆಪಿ ಕಾರ್ಯಕರ್ತರು ಬಿಎಸ್‌ವೈ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೈಕಾರ ಕೂಗಿದರು..

ಬಿಎಸ್‌ವೈ ಜೊತೆಗೆ ಬಿಜೆಪಿ ಮುಖಂಡರಾದ ಶ್ರೀರಾಮುಲು, ಗೋವಿಂದ ಕಾರಜೋಳ, ಆರ್ ಅಶೋಕ್ ಮತ್ತು ಕೆ ಎಸ್ ಈಶ್ವರಪ್ಪ ಸಹ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿತ್ತು. ಆದರೆ ನೀರಿಕ್ಷೆ ಹುಸಿಯಾಗಿದ್ದು ಇಂದಿನ ಸಮಾರಂಭದಲ್ಲಿ ಯಾವುದೇ ಮಂತ್ರಿಗಳು ಪ್ರಮಾಣವಚನ ಸ್ವೀಕರಿಸಲಿಲ್ಲ…
ಇನ್ನು ಪ್ರತಿಜ್ಞಾ ವಿಧಿ ಕಾರ್ಯಕ್ರಮಕ್ಕೆ ಕೇಂದ್ರ ಸಚಿವರಾದ ಪ್ರಕಾಶ್ ಜಾವಡೇಕರ್, ಅನಂತ್ ಕುಮಾರ್, ಡಿವಿ ಸದಾನಂದಗೌಡ, ರಾಜ್ಯ ನಾಯಕರಾದ ಕೆಎಸ್ ಈಶ್ವರಪ್ಪ, ಕಟ್ಟಾ ಸುಬ್ರಮಣ್ಯ ನಾಯ್ಡು ಸೇರಿದಂತೆ ಬಿಜೆಪಿ ಹಲವು ಗಣ್ಯ ನಾಯಕರು ಉಪಸ್ಥಿತರಿದ್ದರು…

LEAVE A REPLY

Please enter your comment!
Please enter your name here