Home KARNATAKA ಕೊರೊನಾ ಆತಂಕದ ನಡುವೆ ಎಸ್ಎಸ್ಎಲ್‌ಸಿ ಎರಡನೇ ದಿನದ ಪರೀಕ್ಷೆ; ಪ್ರೌಢ ಶಿಕ್ಷಣ ಮಂಡಳಿಯಿಂದ ಅಗತ್ಯ ಸುರಕ್ಷತಾ...

ಕೊರೊನಾ ಆತಂಕದ ನಡುವೆ ಎಸ್ಎಸ್ಎಲ್‌ಸಿ ಎರಡನೇ ದಿನದ ಪರೀಕ್ಷೆ; ಪ್ರೌಢ ಶಿಕ್ಷಣ ಮಂಡಳಿಯಿಂದ ಅಗತ್ಯ ಸುರಕ್ಷತಾ ಕ್ರಮ

211
0
SHARE

ಬೆಂಗಳೂರು. ಕೊರೊನಾ ಭೀತಿಯ ನಡುವೆಯೂ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳು ಇಂದು ಗಣಿತ ಪರೀಕ್ಷೆಯನ್ನು ಎದುರಿಸಲು ಸಿದ್ಧರಾಗಿದ್ದಾರೆ. ರಾಜ್ಯಾದ್ಯಂತ ಸುಮಾರು 8.48 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. ಒಟ್ಟು 2,879 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ವೇಳೆ ಯಾವುದೇ ಅಕ್ರಮಕ್ಕೆ ಎಡೆ ಮಾಡಿಕೊಡದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.ಕೊರೊನಾ  ಭೀತಿ ಹಿನ್ನೆಲೆಯಲ್ಲಿ  ಅಗತ್ಯ ಸುರಕ್ಷತಾ ಕ್ರಮವನ್ನು ಪ್ರೌಢ ಶಿಕ್ಷಣ ಮಂಡಳಿ ಕೈಗೊಂಡಿದೆ.

ಬೆಳಗ್ಗೆ 10.30ಕ್ಕೆ ಪರೀಕ್ಷೆ ಆರಂಭವಾಗಲಿದೆ. ಆದರೂ ಒಂದುವರೆ ಗಂಟೆ ಮುಂಚಿತವಾಗಿ ಪರೀಕ್ಷೆ ಕೇಂದ್ರಗಳಿಗೆ ಆಗಮಿಸುವಂತೆ ಸೂಚಿಸಲಾಗಿದೆ. ವಿದ್ಯಾರ್ಥಿಗಳು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಸಾಮಾಜಿಕ ಅಂತರ ಕೂಡ ಕಡ್ಡಾಯವಾಗಿದ್ದು, ಗುಂಪುಗೂಡದಂತೆ ನಿರ್ದೇಶನ ನೀಡಲಾಗಿದೆ. ಜ್ವರ,ನೆಗಡಿ, ಶೀತ ಕಂಡು ಬರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸಲಾಗುತ್ತದೆ.

LEAVE A REPLY

Please enter your comment!
Please enter your name here