ಬಾಗಲಕೋಟೆ. ಇಬ್ಬರು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಬಾಗಲಕೋಟೆ ಜಿಲ್ಲಾ ಕೋವಿಡ್ ಆಸ್ಪತ್ರೆಯ ಪರೀಕ್ಷೆಯಲ್ಲಿ ಪಾಸಿಟಿವ್ ಇರೋದು ಕಂಡು ಬಂದಿದೆ ಅಂತಾ ಡಿಡಿಪಿಐ ಶ್ರೀಶೈಲ ಬಿರಾದಾರ ಮಾಹಿತಿ ನೀಡಿದ್ದಾರೆ. ಕಲಾದಗಿ ಗ್ರಾಮದ ಪರೀಕ್ಷಾ ಕೇಂದ್ರದ ವಿದ್ಯಾರ್ಥಿಗಳು ಮೊದಲ ದಿನ ಪರೀಕ್ಷೆಗೆ ಹಾಜರಾಗಿದ್ದ ವೇಳೆ ಥರ್ಮಲ್ ಸ್ಕ್ಯಾನ್ ವೇಳೆ ಶೀತ, ನೆಗಡಿ, ಕೆಮ್ಮಿನ ಲಕ್ಷಗಳಿದ್ದವು. ಒಟ್ಟು ಏಳು ಜನ ವಿದ್ಯಾರ್ಥಿಗಳಲ್ಲಿ ಆ ಲಕ್ಷಣ ಕಾಣಿಸಿದ್ದವು.
ಹಾಗಾಗಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿದ್ದರು. ಸದ್ಯ ಆ ಏಳು ಜನ ವಿದ್ಯಾರ್ಥಿಗಳ ಪೈಕಿ ಇಬ್ಬರಲ್ಲಿ ಪಾಸಿಟವ್ ಕಂಡು ಬಂದಿದ್ದು, ಉಳಿದ ವಿದ್ಯಾರ್ಥಿಗಳಲ್ಲಿ ನೆಗಟಿವ್ ಇದೆ.
ಪಾಸಿಟಿವ್ ಬಂದಿರುವ ಇಬ್ಬರು ವಿದ್ಯಾರ್ಥಿಗಳಿಗೆ ನಾಳೆಯ ಪರೀಕ್ಷೆಗೆ ಅವಕಾಶ ಇರಲ್ಲ. ಮುಂಬರುವ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡಲಾಗುವುದು. ಅದನ್ನು ಪೂರಕ ಪರೀಕ್ಷೆ ಎನ್ನದೇ ಮೊದಲ ಪರೀಕ್ಷೆ ಎಂದೇ ಪರಿಗಣಿಸಲಾಗಿತ್ತೆ ಅಂತಾ ಡಿಡಿಪಿಐ ಶ್ರೀಶೈಲ ಬಿರಾದಾರ ತಿಳಿಸಿದ್ದಾರೆ.