ದೇಶದಲ್ಲಿ ಒಂದೇ ದಿನ 3,993 ಸೋಂಕಿತರು ಪತ್ತೆ..! ಕೊರೋನಾಗೆ 108 ಜನರು ಬಲಿ

ರಾಷ್ಟ್ರೀಯ

ನವದೆಹಲಿದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 3,993 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, 24 ಗಂಟೆಯಲ್ಲಿ ಮತ್ತೆ 108 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 515210 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 49948 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 8055 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42406150 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ನಿನ್ನೆ 21,34,463 ಜನರಿಗೆ ವ್ಯಾಕ್ಸಿನ್ ನೀಡಲಾ ಗಿದ್ದು, ದೇಶದಲ್ಲಿ ಈವರೆಗೆ 1,79,13,41,295 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 8,73,395 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.‌

Leave a Reply

Your email address will not be published.