ದೇಶದಲ್ಲಿ ಒಂದೇ ದಿನ 4,575 ಜನರಲ್ಲಿ ಸೋಂಕು ಪತ್ತೆ..! 145 ಮಂದಿ ಕೊರೋನಾಗೆ ಬಲಿ

ರಾಷ್ಟ್ರೀಯ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಒಂದೇ ದಿನದಲ್ಲಿ ಕೊಂಚ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ಕೇವಲ 4,575 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಮತ್ತೆ ಏರಿಕೆಯಾಗಿದ್ದು, 24 ಗಂಟೆಯಲ್ಲಿ ಮತ್ತೆ 145 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,15,355 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 46,962 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 7,416 ಜನರು ಕೋವಿಡ್ ನಿಂದ ಗುಣಮುಖ ರಾಗಿದ್ದಾರೆ. ದೇಶದಲ್ಲಿ ಈವರೆಗೆ 4,24,13,566 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ನಿನ್ನೆ 18,69,103 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,79,33,99,555 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 8,97,904 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Leave a Reply

Your email address will not be published.