5 ಜನ ಕೀಚಕರಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ..! ಕಾಪಾಡಲಾಗದ ಸ್ಥಿತಿಯಲ್ಲಿ ಸಹೋದರ

ರಾಷ್ಟ್ರೀಯ

ಲಕ್ನೋ: 8ನೇ ತರಗತಿಯ ವಿದ್ಯಾರ್ಥಿನಿಯನ್ನು 5 ಜನರು ಸೇರಿ ಸಾಮೂಹಿಕ ಅತ್ಯಾಚಾರವೆಸಗಿದ್ದು, ಆಕೆಯ ಸಹೋದರನನ್ನು ಮನ ಬಂದಂತೆ ಥಳಿಸಿದ ಘಟನೆ ಉತ್ತರಪ್ರದೇಶದ ಗಾಜಿಯಾಬಾದ್‍ನಲ್ಲಿ ನಡೆದಿದೆ. ಸಂತ್ರಸ್ತೆ ಮತ್ತು ಆಕೆಯ ಸಹೋದರ ದೇವಸ್ಥಾನದಿಂದ ತಮ್ಮ ಮನೆಗೆ ಹಿಂದಿರುಗುತ್ತಿದ್ದಾಗ ಐವರು ಆರೋಪಿಗಳನ್ನು ಅವರನ್ನು ಅಪಹರಿಸಿದ್ದಾರೆ. ಇದಾದ ನಂತರ ಸಂತ್ರಸ್ತೆಯ ಸಹೋದರನನ್ನು ಕೊಠಡಿಯಲ್ಲಿ ಬಂಧಿಸಿ ಅವನನ್ನು ಥಳಿಸಿದ್ದಾರೆ.

ಇದಾದ ಬಳಿಕ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಅತ್ಯಾಚಾರದ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಸಹೋದರನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಆದರೆ ಘಟನೆ ಬಗ್ಗೆ ತಿಳಿದ ಸಂತ್ರಸ್ತೆಯ ಕುಟುಂಬಸ್ಥರು ಮೋದಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿ ಸಿದ್ದಾರೆ. ಘಟನೆ ಸಂಬಂಧಿಸಿ ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಆರೋಪಿಯನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಪೋಲೀಸರು ತಿಳಿಸಿದ್ದಾರೆ.

Leave a Reply

Your email address will not be published.