5 ಲಕ್ಷ ಲಂಚ ಸ್ವೀಕಾರ ಆರೋಪ: ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋದ ಮಂಜುನಾಥ್

ಬೆಂಗಳೂರು

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಹಿಂದಿನ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಭೂ ವ್ಯಾಜ್ಯವೊಂದರಲ್ಲಿ ತಮ್ಮ ಪರ ಆದೇಶ ನೀಡಲು 5 ಲಕ್ಷ ರೂ. ಲಂಚ ಸ್ವೀಕಾರ ಆರೋಪ ಪ್ರಕರಣದಲ್ಲಿ ಬಂಧಿತರಾಗಿರುವ ಮಂಜುನಾಥ್ ಅವರ  ಜಾಮೀನು ಅರ್ಜಿ ಇನ್ನೂ ಏಕಸದಸ್ಯಪೀಠದ ಮುಂದೆ ವಿಚಾರಣೆಗೆ ಬರಬೇಕಿದೆ.

ಇದೇ ಪ್ರಕರಣದ ಸಂಬಂಧ ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯ ಉಪತಹಸೀಲ್ದಾರ್ ಪಿ.ಎಸ್. ಮಹೇಶ್ ಜಾಮೀನು ಅರ್ಜಿ ಗುರುವಾರ ವಿಚಾರಣೆಗೆ ಬರಲಿದ್ದು, ಅದರ ಜೊತೆ ಜೆ.ಮಂಜುನಾಥ್ ಜಾಮೀನು ಅರ್ಜಿಯನ್ನೂ ಸಹ ವಿಚಾರಣೆಗೆ ಕೈಗೆತ್ತಿಕೊಳ್ಳುವ ಸಾಧ್ಯತೆಗಳಿವೆ.

Leave a Reply

Your email address will not be published.