ಶಾಲಾ ಕಟ್ಟಡಕ್ಕೆ 5 ಲಕ್ಷ ಬಿಡುಗಡೆ ಮಾಡಿದ MLC ಕೆ.ಗೋವಿಂದರಾಜು; ಗ್ರಾಮಸ್ಥರ ಪರವಾಗಿ ಸನ್ಮಾನಿಸಿದ ಗ್ರಾ.ಪಂ.ಅಧ್ಯಕ್ಷ ನಂದೀಶ್ ಗೌಡ

ಜಿಲ್ಲೆ

ಮಂಡ್ಯ :- ಮದ್ದೂರು ತಾಲ್ಲೂಕಿನ ಹೆಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುನಗನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ನೂತನ ಕಟ್ಟಡಕ್ಕೆ ವಿರೋಧ ಪಕ್ಷದ ಉಪ ನಾಯಕರು, ವಿಧಾನ ಪರಿಷತ್ ಸದಸ್ಯ ಡಾ.ಕೆ.ಗೋವಿಂದರಾಜು ತಮ್ಮ ಅನುದಾನದಲ್ಲಿ 5 ಲಕ್ಷ ರೂಪಾಯಿ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಹೆಮ್ಮನಹಳ್ಳಿ ಗ್ರಾ.ಪಂ. ಅಧ್ಯಕ್ಷ ನಂದೀಶ್ ಗೌಡ ಅವರು ಇಂದು ಭೇಟಿ ಮಾಡಿ ಗ್ರಾಮಸ್ಥರ ಪರವಾಗಿ ಸನ್ಮಾನಿಸಿದರು.

ಹೆಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದಿಲ್ಲೊಂದು ಸಮಾಜ ಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನರ ಒಳಿತಿಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಅಧ್ಯಕ್ಷ ನಂದೀಶ್ ಗೌಡ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ತಮ್ಮ ಗ್ರಾಮದ ಶಾಲಾ ಕಟ್ಟಡಗಳು ಅವ್ಯವಸ್ಥೆ ಮತ್ತು ಶಿಥಿಲಗೊಂಡಿದ್ದವು. ಈ ಹಿನ್ನೆಲೆಯಲ್ಲಿ ಹುನಗನಹಳ್ಳಿ ಗ್ರಾಮದ ಮಕ್ಕಳನ್ನು ಪಕ್ಕದ ಹೆಮ್ಮನಹಳ್ಳಿ ಗ್ರಾಮದ ಶಾಲೆಗೆ ತಾತ್ಕಾಲಿಕವಾಗಿ ಅಧಿಕಾರಿಗಳು ಸ್ಥಳಾಂತರ ಮಾಡಿದ್ದರು. ಬಿಸಿಲು, ಮಳೆ ಎನ್ನದೇ ಮಕ್ಕಳು ಪ್ರತಿದಿನ ನಡೆದುಕೊಂಡು ಹೋಗುತ್ತಿದ್ದರು. ಇದನ್ನು ಮನಗಂಡ ನಂದೀಶ್ ತಮ್ಮ ಸ್ವಂತ ಹಣದಲ್ಲಿ ಮಕ್ಕಳು ಶಾಲೆಗೆ ಹೋಗಿ ಬರಲು ಆಟೋ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದಾರೆ.

ಇನ್ನು ಪ್ರಸಕ್ತ ವರ್ಷದಲ್ಲಿ ಹುನಗನಹಳ್ಳಿ ಗ್ರಾಮದ ಶಾಲೆಗೆ ಮಕ್ಕಳ ನೋಂದಣಿ ಹಾಗೂ ಹಾಜರಾತಿ ಇಲ್ಲದೆ ಮುಚ್ಚುವ ಸ್ಥಿತಿ ನಿರ್ಮಾಣವಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಕೆ. ಗೋವಿಂದರಾಜು ಅವರನ್ನು ಭೇಟಿ ಮಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ನಂದೀಶ್ ಗೌಡ ಮಾತುಕತೆ ನಡೆಸಿ ಅಲ್ಲಿನ ಪರಿಸ್ಥಿತಿ ಮತ್ತು ವಾಸ್ತವವನ್ನು ಮನದಟ್ಟು ಮಾಡಿಕೊಟ್ಟಿದ್ದರು. ಹಾಗೂ ಶಾಲಾ ಕಟ್ಟಡಕ್ಕೆ ತಮ್ಮ ಅನುದಾನದಲ್ಲಿ ಹಣ ಬಿಡುಗಡೆ ಮಾಡುವಂತೆಯೂ ಮನವಿ ಸಲ್ಲಿಸಿದ್ದರು.

ನಂದೀಶ್ ಗೌಡ ಅವರ ಮನವಿಗೆ ಸ್ಪಂದಿಸಿರುವ ವಿಧಾನ ಪರಿಷತ್ ಸದಸ್ಯ ಕೆ.ಗೋವಿಂದರಾಜು ಅವರು 2022-23 ನೇ ಸಾಲಿನ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಹುನಗನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಕಟ್ಟಡಕ್ಕೆ 5 ಲಕ್ಷ ರೂಪಾಯಿ ಅನುದಾನವನ್ನು ಬಿಡುಗಡೆಗೊಳಿಸಿದ್ದಾರೆ. ಶಾಲಾ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಸೋಮವಾರ ವಿಧಾನ ಪರಿಷತ್ ಸದಸ್ಯ ಕೆ.ಗೋವಿಂದರಾಜು ಅವರನ್ನು ಗ್ರಾ. ಪಂ. ಅಧ್ಯಕ್ಷ ನಂದೀಶ್ ಗೌಡ ಭೇಟಿ ಮಾಡಿ ಗ್ರಾಮಸ್ಥರು ಪರವಾಗಿ ಹಾಗೂ ವೈಯಕ್ತಿಕವಾಗಿ ಸನ್ಮಾನಿಸಿ, ಧನ್ಯವಾದ ತಿಳಿಸಿದ್ದಾರೆ.

Leave a Reply

Your email address will not be published.