75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ: ‘’ಹರ್ ಘರ್ ತಿರಂಗಾ’’ ಅಭಿಯಾನಕ್ಕೆ ತುಷಾರ್ ಗಿರಿನಾಥ್ ಚಾಲನೆ

ಬೆಂಗಳೂರು

ಬೆಂಗಳೂರು: 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನ ಕಾರ್ಯಕ್ರಮಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಚಾಲನೆ ನೀಡಿದ್ದಾರೆ. ಯಲಹಂಕ ವಲಯ RMZ ಗ್ಯಾಲೇರಿಯಾ ಮಾಲ್ ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಡೊಲ್ಲು ಬಾರಿಸುವ ಮೂಲಕ ಚಾಲನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕಾಗಿ ಪ್ರಚಾರ ಸಾಮಗ್ರಿಗಳಾದ ಕರಪತ್ರ, ಸ್ಟಿಕ್ಕರ್ ಹಾಗೂ ಬ್ಯಾಡ್ಜ್ ಅನ್ನು ಅನಾವರಣಗೊಳಿಸಿದರು. ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿರುವ “ಹರ್ ಘರ್ ತಿರಂಗಾ” ಅಭಿಯಾನದಡಿ ನಗರದ ವಿಧಾನಸೌಧ, ಎಂ.ಎಸ್ ಬಿಲ್ಡಿಂಗ್, ವಿ.ವಿ.ಟವರ್ ಸೇರಿದಂತೆ ಇನ್ನಿತರೆ ಪ್ರಮುಖ ಸ್ಥಳಗಳಲ್ಲಿ ಧ್ವಜಗಳನ್ನು ಮಾರಾಟ ಮಾಡಲು ವ್ಯವಸ್ಥೆ ಮಾಡಿರುವ ಪಾಲಿಕೆಯ ಧ್ವಜ ಮಾರಾಟ ಮೊಬೈಲ್ ಕೇಂದ್ರಕ್ಕೆ ಮಾನ್ಯ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಚಾಲನೆ ನೀಡಿದರು.

ಬಳಿಕ ಬಿಬಿಎಂಪಿ ವ್ಯಾಪ್ತಿಯಲ್ಲಿ  ಪೌರಕಾರ್ಮಿಕರ ಸೇವೆಯನ್ನು ಗುರುತಿಸಿ  ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ರವರು ಸಂದೇಶದ ಮೂಲಕ ಅಭಿನಂದನಾ ಪತ್ರವನ್ನು ಕಳುಹಿಸಿದ್ದು, ಅಭಿನಂದನಾ ಪತ್ರವನ್ನು ಮುಖ್ಯ ಆಯುಕ್ತರು ಪೌರಕಾರ್ಮಿಕರಿಗೆ ನೀಡಿದರು. ಈ ಸಂದರ್ಭದಲ್ಲಿ ವಿಶೇಷ ಆಯುಕ್ತರಾದ ರಂಗಪ್ಪ, ವಲಯ ಜಂಟಿ ಆಯುಕ್ತರಾದ ಪೂರ್ಣಿಮಾ, ಖ್ಯಾತ ಗಾಯಕರಾದ ಜಯಶ್ರೀ, ಮುಖ್ಯ ಅಭಿಯಂತರರಾದ ರಂಗನಾಥ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published.