ಮಸೀದಿ ಬಳಿ ಬಾಂಬ್ ಸ್ಫೋಟ: 8 ಸಾವು, 18 ಮಂದಿಗೆ ಗಾಯ

ಅಂತರಾಷ್ಟ್ರೀಯ

ಕಾಬೂಲ್: ಮಸೀದಿಯೊಂದರ ಬಳಿ ಕಾರ್ಟ್‌ನಲ್ಲಿ ಅಡಗಿಸಿಟ್ಟಿದ್ದ ಬಾಂಬ್ ಸ್ಫೋಟಗೊಂಡ ಪರಿಣಾಮ 8 ಜನರು ಮೃತಪಟ್ಟಿದ್ದು, 18 ಮಂದಿ ಗಾಯಗೊಂಡಿದ್ದಾರೆ ಘಟನೆ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ನ ಸರ್-ಇ ಕರೇಜ್ ಪ್ರದೇಶದಲ್ಲಿ ನಡೆದಿದೆ.

ಘಟನೆಯಲ್ಲಿ ಮೊದಲ ಇಬ್ಬರು ಮೃತಪಟ್ಟಿದ್ದು, ಬಳಿಕ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ಕರೆದೊಯ್ಯತ್ತಿದ್ದ ವೇಳೆ ಉಳಿದ ಆರು ಮಂದಿ ಮೃತಪಟ್ಟಿದ್ದಾರೆ. ಇದುವರೆಗೂ ಘಟನೆಯ ಹೊಣೆಯನ್ನು ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ.

ಈ ಹಿಂದೆ ದೊಡ್ಡ ಪ್ರಮಾಣದ ದಾಳಿಗಳಲ್ಲಿ ಅಫ್ಘಾನಿಸ್ತಾನದ ಅಲ್ಪಸಂಖ್ಯಾತ ಶಿಯಾಗಳನ್ನು ಗುರಿಯಾಗಿಸಿಕೊಂಡಿರುವ ಇಸ್ಲಾಮಿಕ್ ಸ್ಟೇಟ್ ಗುಂಪಿನ ಮೇಲೆ ಈ ಸ್ಫೋಟದ ಆರೋಪ ಬರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಖೊರಾಸನ್ ಪ್ರಾಂತ್ಯದಲ್ಲಿ ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ IS ನ ಪ್ರಾದೇಶಿಕ ಅಂಗಸಂಸ್ಥೆಯು ಕಳೆದ ಆಗಸ್ಟ್‌ನಲ್ಲಿ ತಾಲಿಬಾನ್ ಅಧಿಕಾರವನ್ನು ವಶಪಡಿಸಿಕೊಂಡ ನಂತರ ದೇಶಾದ್ಯಂತ ಮಸೀದಿಗಳು ಮತ್ತು ಅಲ್ಪಸಂಖ್ಯಾತರ ಮೇಲೆ ದಾಳಿಗಳನ್ನು ಹೆಚ್ಚಿಸಿದೆ.

Leave a Reply

Your email address will not be published.