ಕರ್ನಾಟಕದ 91 ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಎಂಬಿಬಿಎಸ್ ಓದುತ್ತಿದ್ದಾರೆ: ಸಚಿವ ಡಾ.ಕೆ.ಸುಧಾಕರ್

ರಾಜಕೀಯ

ಬೆಂಗಳೂರು: ಉಕ್ರೇನ್ ನಲ್ಲಿ ಕ್ಷಣ ಕ್ಷಣಕ್ಕೂ ರಷ್ಯಾ ನಡುವಿನ ಯುದ್ಧ ತಾರಕಕ್ಕೇರುತ್ತಿದ್ದು,  ಕರ್ನಾಟಕದ ವಿದ್ಯಾರ್ಥಿಗಳು ಅಲ್ಲಿ ಸಿಲುಕಿರು ವುದಿಂದ ಯಾವ ಕ್ಷಣದಲ್ಲಿ ಎಲ್ಲಿ ಬಾಂಬ್ ಬೀಳುತ್ತೋ ಎನ್ನುವ ಭೀತಿ ಶುರುವಾಗಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದು, ಕರ್ನಾಟಕದ 91 ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಎಂಬಿಬಿಎಸ್ ಓದುತ್ತಿದ್ದಾರೆ. ಅವರನ್ನು ಉಕ್ರೇನ್ ನಿಂದ ಸುರಕ್ಷಿತವಾಗಿ ಮರಳಲು ನಮ್ಮ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಅವರ ಸುರಕ್ಷಿತವಾಗಿ ಮರಳುವಿಕೆಗಾಗಿ ಎಲ್ಲರೂ ಪ್ರಾರ್ಥಿಸೋಣ ಎಂದು ಹೇಳಿದ್ದಾರೆ.

Leave a Reply

Your email address will not be published.