ಎಸಿಬಿ ರಚನೆ ಆದೇಶ ರದ್ದುಪಡಿಸಿದ ಹೈಕೋರ್ಟ್: ಮಾಜಿ ಸಿಎಂ SM ಕೃಷ್ಣ ಹೇಳಿದ್ದೇನು..?

ಬೆಂಗಳೂರು ರಾಜಕೀಯ

ಬೆಂಗಳೂರು: ಎಸಿಬಿ ರದ್ದು ಪಡಿಸಿ ಲೋಕಾಯುಕ್ತ ಸಂಸ್ಥೆಗೆ ಬಲ ನೀಡಿದ ನ್ಯಾಯಾಲಯದ ತೀರ್ಪನ್ನು ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಸ್ವಾಗತಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಎಸ್​ಎಂ ಕೃಷ್ಣ ಅವರು, ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿಗಳಾಗಿದ್ದಾಗ ಪ್ರಾರಂಭಗೊಂಡು ನಾನು ಮುಖ್ಯಮಂತ್ರಿಗಳಾಗಿದ್ದಾಗ, ದಿ. ನ್ಯಾಯಮೂರ್ತಿ ಎನ್ ವೆಂಕಟಾಚಲ ಅವರು ಮತ್ತು ನ್ಯಾ. ಸಂತೋಷ ಹೆಗ್ಡೆ ಪರಿಶ್ರಮದಿಂದ ಲೋಕಾಯುಕ್ತ ಸಂಸ್ಥೆ ದೇಶದ ಗಮನ ಸೆಳೆದಿತ್ತು.

ಕಳೆದ ತಿಂಗಳು ಹೈಕೋರ್ಟ್ ಎಸಿಬಿಯಲ್ಲಿನ ಭ್ರಷ್ಟ ವ್ಯವಸ್ಥೆ ಬಗ್ಗೆ ಬಲವಾದ ಛಾಟಿ ಬೀಸಿ ಗಮನ ಸೆಳೆದಿದ್ದು ಜನರ ಸೃತಿ ಪಟಲದಲ್ಲಿ ಇದೆ. ಹೈಕೋರ್ಟ್ ತೀರ್ಪುನಿಂದ ಮತ್ತೆ ಜನರ ದೃಷ್ಟಿ ಲೋಕಾಯುಕ್ತ ಸಂಸ್ಥೆ ಮೇಲೆ ನೆಟ್ಟಿದೆ. ನ್ಯಾಯಾಲಯದ ಮೇಲೆ ವಿಶ್ವಾಸ ಮೂಡಿಸಿ ನ್ಯಾಯ ದೊರೆಯುವ ವಿಶ್ವಾಸ ಇಮ್ಮಡಿಗೊಳಿಸಿದೆ. ಇಂತಹ ತೀರ್ಪು ನೀಡಿದ ನ್ಯಾಯಾಲಯಕ್ಕೆ ನನ್ನ ಅಭಿನಂದನೆಗಳು ಹಾಗೂ ಮತ್ತೆ ಲೋಕಾಯುಕ್ತ ಸಂಸ್ಥೆ ರಾಷ್ಟ್ರದಲ್ಲಿ ಮಾದರಿ ಸಂಸ್ಥೆಯಾಗಿ ರೂಪಿತವಾಗಿ ಜನರ ಸೇವೆ ಮಾಡಲಿ ಎಂದು ಆಶಿಸುತ್ತೇನೆ ಎಂದು ತಿಳಿಸಿದ್ದಾರೆ.

Leave a Reply

Your email address will not be published.