ವ್ಯಕ್ತಿಯೋರ್ವನನ್ನು ಕಿಡ್ನ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಗಳ ಬಂಧನ

ಬೆಂಗಳೂರು

ಬೆಂಗಳೂರು: ವ್ಯಕ್ತಿಯೋರ್ವನನ್ನು ಕಿಡ್ನ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಗಳನ್ನು ಆವಲಹಳ್ಳಿ ಪೊಲೀಸರು ಬಂಧಿಸಿದ್ದಾರೆ. ನಿಶಾಂತ್, ಸಂತೋಷ್ ಮತ್ತು ನವೀನ್ ಬಂಧಿತ ಆರೋಪಿಗಳಾಗಿದ್ದು, ಬೆಂಗಳೂರು ಪೂರ್ವ ತಾಲೂಕಿನ ಕುರುಡು ಸೊಣ್ಣೇನಹಳ್ಳಿಯ ಅಲೆಕ್ಸಾಂಡರ್ ಎಂಬ ವ್ಯಕ್ತಿಯನ್ನು ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಅಲ್ಲದೇ ಆರೋಪಿಗಳು ಕಿಡ್ನ್ಯಾಪ್ ಆದ ಆತನ ಹೆಂಡತಿ ರತ್ನಮ್ಮ ಬಳಿ ಹಣದ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆ ಭಯಭೀತರಾಗಿ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ರತ್ನಮ್ಮ ದೂರು ದಾಖಲಿಸಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು, ಇನ್ಸ್ಪೆಕ್ಟರ್ ಪ್ರಕಾಶ್ ಡಿ.ಆರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ದೂರು ದಾಖಲಾದ ಮೂರೇ ದಿನದಲ್ಲಿ ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. ಇನ್ನೂ ಆರೋಪಿಗಳು ಕೋರಮಂಗಲ ಲಾಡ್ಜ್ ನಲ್ಲಿ ಇರುವುದರ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಪ್ರಕರಣದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

Leave a Reply

Your email address will not be published.