ಮುಂದುವರಿದ ಮಳೆ ಅಬ್ಬರ: ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಜಿಲ್ಲೆ

ಕಾರವಾರ: ರಾಜ್ಯದ ಹಲವೆಡೆ ಮಳೆ ಅಬ್ಬರ ಜೋರಾಗಿದ್ದು, ಅವಾಂತರ ಸೃಷ್ಟಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ಹೊನ್ನಾವರ, ಅಂಕೋಲಾ, ಜೋಯಿಡಾ, ಕುಮಟಾ, ಕಾರವಾರ ಭಾಗದಲ್ಲಿ ಭಾರೀ ಮಳೆ ಮುಂದುವರಿದಿದೆ.

ಇನ್ನೂ ಮೂರು ದಿನ ಮಳೆ ಮುಂದುವರೆಯುವ ಸಾಧ್ಯತೆ ಇದ್ದ, ಘಟ್ಟದಲ್ಲಿ ಭೂಕುಸಿತ ಸಾಧ್ಯತೆ ಹಿನ್ನೆಲೆ, ಸುರಕ್ಷಿತವಾಗಿ ವಾಹನ ಸಂಚಾರ ಮಾಡಲು ಜಿಲ್ಲಾಡಳಿತ ಮನವಿ ಮಾಡಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಕಳಸ ಬಳಿಯ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕೊಡಗಿನಲ್ಲಿ ಮಳೆಯಿಂದ ಮಡಿಕೇರಿ ತಾಲೂಕಿನ ಭಾಗಮಂಡಲ–ನಾಪೋಕ್ಲು ರಸ್ತೆ ಜಲಾವೃತವಾಗಿದೆ. ಈ ಹಿನ್ನೆಲೆ ಶಾಲೆಗಳಿಗೆ ರಜೆ ನೀಡಲು ಭಾಗಮಂಡಲ ಜನರು ಒತ್ತಾಯಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಭಾರೀ ಮಳೆ‌ಯಾಗುತ್ತಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚನೆ ಮೇರೆಗೆ ತಹಶೀಲ್ದಾರ್ ರಜೆ ನೀಡಿದ್ದಾರೆ.

Leave a Reply

Your email address will not be published.