ಅಮೃತ್ ಪೌಲ್ ಅರೆಸ್ಟ್: ಸಿಎಂ ಬೊಮ್ಮಾಯಿ ಹೇಳಿದ್ದೇನು..?

ಬೆಂಗಳೂರು

ಬೆಂಗಳೂರು: ಇಡೀ ವ್ಯವಸ್ಥೆ ಸ್ವಚ್ಛಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಕೈ ಹಾಕಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಈ ಸಂಬಂಧ ಕಬ್ಬನ್ ಪಾರ್ಕ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಮೃತ್‌ ಪೌಲ್‌ ಬಂಧನದಿಂದ ಸರ್ಕಾರಕ್ಕೆ ಮುಜುಗರ ಆಗಿಲ್ಲ. ತಪ್ಪಿತಸ್ಥರನ್ನು ಬಂಧಿಸುವುದಾಗಿ ಹೇಳಿದ್ದೆ. ಆ ಕೆಲಸವನ್ನು ಸರ್ಕಾರ ಮಾಡಿದೆ ಎಂದರು. ಇನ್ನೂ ನಮ್ಮ ಸರ್ಕಾರ ಅಲ್ಲದೇ ಬೇರೆ ಯಾವುದೇ ಸರ್ಕಾರ ಈ ಕೆಲಸ ಮಾಡುತ್ತಿರಲಿಲ್ಲ. ನಾವು ಮಾಡಿದ್ದೇವೆ. ಈ ಸಂಬಂಧ ಸಾಕ್ಷಿಗಳನ್ನು ಕಲೆಹಾಕಲಾಗುತ್ತದೆ ಎಂದು ಹೇಳಿದರು. ಅಲ್ಲದೇ 545 ಪಿಎಸ್ ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆಸಿದ ಆರೋಪದಡಿ ಎಡಿಜಿಪಿ ಅಮೃತ್ ಪೌಲ್ ಅವರನ್ನು ಸಿಐಡಿ ಪೊಲೀಸರು ಇಂದು ಬಂಧಿಸಿ 10 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದ್ದಾರೆ.

Leave a Reply

Your email address will not be published.