ರಕ್ಷಣಾ ಆಹಾರ ಸಂಶೋಧನಾ ಪ್ರಯೋಗಾಲಯದಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ತಂತ್ರಜ್ಞಾನ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ರಕ್ಷಣಾ ಆಹಾರ ಸಂಶೋಧನಾ ಪ್ರಯೋಗಾಲಯ ದಲ್ಲಿ ಖಾಲಿ ಇರುವ ಅಪ್ರೆಂಟಿಸ್ ಟ್ರೈನಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಒಟ್ಟು 17 ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಸಲು ಮಾರ್ಚ್ 3, 2022 ಕೊನೆಯ ದಿನವಾಗಿದೆ. ಹೆಚ್ಚಿನ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ rac.gov.in ಭೇಟಿ ನೀಡಬಹುದು.

ಒಟ್ಟು 17 ಹುದ್ದೆಗಳ ಮಾಹಿತಿ ಇಂತಿದೆ:
ಗ್ರಾಜುಯೇಟ್ ಅಪ್ರೆಂಟಿಸ್ – 8 ಹುದ್ದೆಗಳು
ಡಿಪ್ಲೋಮಾ ಅಪ್ರೆಂಟಿಸ್ – 9 ಹುದ್ದೆಗಳು

ಶೈಕ್ಷಣಿಕ ವಿದ್ಯಾರ್ಹತೆರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಟ್ರೈನಿಂಗ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು  ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕಡ್ಡಾಯವಾಗಿ  ಹುದ್ದೆಗೆ ಅನುಗುಣವಾಗಿ ವಿದ್ಯಾರ್ಹತೆ ಪಡೆದಿರಬೇಕು.

ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸಿದಲ್ಲಿ  ಆಹಾರ ತಂತ್ರಜ್ಞಾನ, ಬಿಎಸ್ಸಿ ಆಹಾರ ವಿಜ್ಞಾನ, ಬಯೋ-ಟೆಕ್ನಾಲಜಿ, ಬಯೋಇನ್‌ಫರ್ಮ್ಯಾಟಿಕ್ಸ್, ಬಯೋ-ಎಂಜಿನಿಯರಿಂಗ್, ಬಯೋಮೆಡಿಕಲ್ ಎಂಜಿನಿಯರಿಂಗ್, ಕೆಮಿಕಲ್ ಎಂಜಿನಿಯರಿಂಗ್, ಪಾಲಿಮರ್ ಎಂಜಿನಿಯರಿಂಗ್, ಪ್ಲಾಸ್ಟಿಕ್ ಎಂಜಿನಿಯರಿಂಗ್, ಪಾಲಿಮರ್ ಸೈನ್ಸ್‌ನಲ್ಲಿ B.Tech ಪಾಸಾಗಿರಬೇಕು.

ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸಿದಲ್ಲಿ ಆಹಾರ ಮತ್ತು ಪೋಷಣೆ, ಹೋಟೆಲ್ ನಿರ್ವಹಣೆ, ಅಡುಗೆ ತಂತ್ರಜ್ಞಾನ, ಕಂಪ್ಯೂಟರ್ ಅಪ್ಲಿಕೇಶನ್, ಎಲೆಕ್ಟ್ರಾನಿಕ್ಸ್ ಕಮ್ಯುನಿಕೇಷನ್ ಎಂಜಿನಿಯರಿಂಗ್ ಮತ್ತು ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಪದವಿ ಪಡೆದಿರಬೇಕು.

Leave a Reply

Your email address will not be published.